ಗಣರಾಜ್ಯೋತ್ಸವದ ಹಿನ್ನೆಲೆ: ಶೇ 50ರ ರಿಯಾಯಿತಿಯಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಕೃತಿಗಳ ಮಾರಾಟ
ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಜನವರಿ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇ 50 ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು ಎಂದು ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ
ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ ಹಾಗೂ ಎಲ್ಲಾ ಜಿಲ್ಲೆಗಳ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ಈ ರಿಯಾಯಿತಿ ಸೌಲಭ್ಯ ದೊರೆಯಲಿದೆ. ಅಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಆನ್ ಲೈನ್ ನಲ್ಲಿ ಕೂಡ ಈ ಶೇ.50 ರಿಯಾಯಿತಿ ಲಭ್ಯವಿದೆ.
ಇದಲ್ಲದೆ ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳನ್ನು ಅಂತರ್ಜಾಲದಲ್ಲಿಯೂ ಕೂಡ ಶೇಕಡಾ 50ರ ರಿಯಾಯಿತಿ ದರದಲ್ಲಿ ಪಡೆಯಬಹುದು. ಅಂದರೆ www.kannadapustakapradhikara.com ದಲ್ಲಿ ನಮ್ಮ ಪುಸ್ತಕಗಳು ವಿಭಾಗದಲ್ಲಿ ಆಯ್ಕೆ ಮಾಡಿ, ಆನ್ ಲೈನ್ ಮೂಲಕ ಹಣ ಪಾವತಿಸಿ ಪುಸ್ತಕಗಳನ್ನು ಅಂಚೆ ಮೂಲಕ ಪಡೆಯಬಹುದಾಗಿದೆ.
ಕನ್ನಡ ಪುಸ್ತಕ ಪ್ರಾಧಿಕಾರವು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಎಲ್ಲಾ ಪ್ರಕಾರದ ಸಾಹಿತ್ಯ ಕೃತಿಗಳನ್ನು ಈವರೆಗೆ ಪ್ರಕಟಿಸುತ್ತಾ ಬಂದಿದೆ. ಇವುಗಳಲ್ಲಿ ವ್ಯಕ್ತಿ ಚಿತ್ರಗಳು, ನಾಟಕಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಜಾನಪದ, ಪರಿಸರ, ಕೃಷಿ ಹೀಗೆ ಹಲವು ಹತ್ತು ಪ್ರಕಾರಗಳಲ್ಲಿ ಸಾಹಿತ್ಯ ಕೃತಿಗಳನ್ನು ಸುಮಾರು 349 ಶೀರ್ಷಿಕೆಗಳನ್ನು ಮುದ್ರಿಸಿ ಪ್ರಕಟಿಸಿದೆ.
ಅತ್ಯಂತ ಮೌಲಿಕವಾದ, ಪ್ರಾಜ್ಞರಿಂದ ರಚಿತವಾದ ಈ ಕೃತಿಗಳನ್ನು ಜನಸಾಮಾನ್ಯರಿಗೆ ಸುಲಭ ಬೆಲೆಯಲ್ಲಿ ತಲುಪಿಸಬೇಕೆಂಬ ಉದ್ದೇಶ ಕನ್ನಡ ಪುಸ್ತಕ ಪ್ರಾಧಿಕಾರದ್ದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


