ಬಾಗಲಕೋಟೆ: ಸಾರಿಗೆ ಸಂಸ್ಥೆ ಬಸ್-ಕಾರು ಮುಖಾಮುಖಿ; ಸ್ಥಳದಲ್ಲಿಯೇ ನಾಲ್ವರು ಸಾವು
ಓವರ್ ಟೇಕ್ ಮಾಡುವ ಭರದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಳಿ ನಡೆದಿದೆ.

ಬಾಗಲಕೋಟೆ: ಓವರ್ ಟೇಕ್ ಮಾಡುವ ಭರದಲ್ಲಿ ಕೆಎಸ್ಆರ್ಟಿಸಿ ಬಸ್ಸೊಂದು, ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮುಧೋಳ ತಾಲೂಕಿನ ಶಿರೋಳ ಗ್ರಾಮದ ಬಳಿ ನಡೆದಿದೆ.
ಮುಧೋಳ ತಾಲ್ಲೂಕಿನ ಶಿರೋಳ ಗ್ರಾಮದ ಬಳಿ ಶುಕ್ರವಾರ ಬೆಳಗಿನ ಜಾವ ವಾಯವ್ಯ ಕರ್ನಾಟಕ ರಸ್ತೆ ಸಂಸ್ಥೆ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿ ನಾಲ್ವರು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಜಮಖಂಡಿ ತಾಲ್ಲೂಕಿನ ಗೋಠೆ ಹಾಗೂ ಕಾಜಿ ಬೀಳಗಿ ಗ್ರಾಮದ ಹಣಮಂತ (21), ರಿಯಾಜ್ (25), ಬಾಲಪ್ಪ (34) ಹಾಗೂ ಸಿದ್ದರಾಯ (34) ಮೃತಪಟ್ಟವರು. ಎಲ್ಲರೂ ಕಾಜಿ ಬೀಳಗಿಯಿಂದ ಧಾರವಾಡಕ್ಕೆ ಹೊರಟಿದ್ದರು. ಬಸ್ ಬೆಳಗಾವಿಯಿಂದ ಮುಧೋಳ ಮಾರ್ಗವಾಗಿ ಕಲಬುರ್ಗಿಗೆ ಹೊರಟಿತ್ತು.
ಕಬ್ಬು ಸಾಗಣೆ ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ಬಸ್ಸು ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಕಾರು ನಜ್ಜುಗುಜ್ಜಾಗಿತ್ತು. ಸ್ಥಳಕ್ಕೆ ಮುಧೋಳ ಠಾಣೆ ಪೊಲೀಸರು ಭೇಟಿ ನೀಡಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


