ಮಂಗಳೂರಿನಲ್ಲಿ ಪ್ರಚೋದನಾತ್ಮಕ ಸಂದೇಶ ಕಳುಹಿಸುತ್ತಿದ್ದ ದುಷ್ಕರ್ಮಿ ಬಂಧನ
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ 19ರಂದು ನಗರದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಕಳುಹಿಸುತ್ತಿದ್ದರು ಎನ್ನಲಾಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಡಿ 19ರಂದು ನಗರದಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಮಾಧ್ಯಮದಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಕಳುಹಿಸುತ್ತಿದ್ದರು ಎನ್ನಲಾಗಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ಬಂಧಿತ ವ್ಯಕ್ತಿಯನ್ನು ನಗರದ ಕೋಡಿ ಉಲ್ಲಾಳ್‍ನ ಅಬೂಬ್‍ಕರ್ ಸಿದ್ದಿಕಿ(48) ಎಂದು ಗುರುತಿಸಲಾಗಿದೆ.
ಡಿ 30ರಂದು ಇದೇ ವಿಷಯವಾಗಿ ಪಾಂಡೇಶ್ವರ ನಿವಾಸಿ ಮೊಯಿದೀನ್ ಹಮೀದ್ ನನ್ನು ಪೊಲೀಸರು ಬಂಧಿಸಿದ್ದರು. ಪ್ರಚೋದನಾತ್ಮಕ ಸಂದೇಶ ಕಳುಹಿಸಿರುವ ಅನೇಕರಿಗೆ ಈಗಾಗಲೇ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಈ ಸಂಬಂಧ ಬಾರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಮಾಜಿಕ ಮಾಧ್ಯಮದಲ್ಲಿ ಕೋಮು ವೈಷಮ್ಯದ ಸಂದೇಶಗಳನ್ನು ಕಳುಹಿಸುವವರ ವಿರುದ್ಧ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಅಂತರ್ಜಾಲದಲ್ಲಿ ಕೋಮು ಸಾಮರಸ್ಯ ಹರಡುವವರ ವಿರುದ್ಧ ಹದ್ದಿನ ಕಣ್ಣಿಡಲು ಪರಿಣಿತ ಸೈಬರ್ ತಂಡ ಕಾರ್ಯನಿರ್ವಹಿಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


