ಕಲಬುರಗಿ ನಿಲ್ದಾಣದಲ್ಲಿ ಗೂಡ್ಸ್ ರೈಲಿನ ಬೋಗಿಯಲ್ಲಿ ಬೆಂಕಿ
ಕಲಬುರಗಿಯಲ್ಲಿ ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರಾತ್ರಿ ನಡೆದಿದೆ.

ಕಲಬುರಗಿ: ಕಲಬುರಗಿಯಲ್ಲಿ ಗೂಡ್ಸ್ ರೈಲಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡ ಘಟನೆ ನಗರದ ರೈಲ್ವೆ ನಿಲ್ದಾಣದಲ್ಲಿ ಬುಧವಾರ ರಾತ್ರಿ ನಡೆದಿದೆ.
ಗೂಡ್ಸ್ ವಾಹನದ ಸಿಬ್ಬಂದಿ ಕೂಡುವ ವಿಶೇಷ ಬೋಗಿಯಲ್ಲಿ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದೆ. ಈ ಘಟನೆ ನಡೆದ ವೇಳೆ ಬೋಗಿಯಲ್ಲಿ 6 ಜನ ಸಿಬ್ಬಂದಿಯಿದ್ದರು ಎಂದು ತಿಳಿದುಬಂದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯವಾಗಿಲ್ಲ. ಎಲ್ಲ ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಶಾರ್ಟ್ ಸರ್ಕ್ಯೂಟ್‌ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿಸಿದ್ದಾರೆ ಬೆಂಕಿ ಹತ್ತಿದ ತಕ್ಷಣವೇ ಸಿಬ್ಬಂದಿ ಬೋಗಿ ಬಿಟ್ಟು ಹೊರಗೆ ಓಡಿ ಬಂದಿದ್ದಾರೆ.
ರೈಲಿನಲ್ಲಿದ್ದ ಕೆಲ ವಸ್ತುಗಳು ಸುಟ್ಟು ಭಸ್ಮವಾಗಿವೆ. ಅಗ್ನಿ ಅವಘಡ ವೇಳೆ ಗೂಡ್ಸ್ ವಾಹನ ಚಾಲನೆಯಲ್ಲಿ ಇರಲಿಲ್ಲ . ಅಗ್ನಿಶಾಮಕ ದಳ ಸಿಬ್ಬಂದಿ ಸಮಯಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


