ರಾಜ್ಯ

ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು

ದೇಶದಲ್ಲಿ ಬಹುಸಂಖ್ಯಾತರಾಗಿರುವ ಹಿಂದೂಗಳು ಸಿಎಎ ವಿರೋಧಿಸುತ್ತಿರುವ ಅಲ್ಪಸಂಖ್ಯಾತರ ಮೇಲೆ ಖಡ್ಗ ಜಳಪಿಸಿದರೆ ಅವರೆಲ್ಲರೂ ನಿರ್ನಾಮವಾಗುತ್ತಾರೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ಪ್ರಚೋದನಾಕಾರಿ ಹೇಳಿಕೆ: ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲು
ಸೋಮಶೇಖರ್ ರೆಡ್ಡಿ (ಸಂಗ್ರಹ ಚಿತ್ರ)
Published On :

ಬೆಂಗಳೂರು: ದೇಶದಲ್ಲಿ ಬಹುಸಂಖ್ಯಾತರಾಗಿರುವ ಹಿಂದೂಗಳು ಸಿಎಎ ವಿರೋಧಿಸುತ್ತಿರುವ ಅಲ್ಪಸಂಖ್ಯಾತರ ಮೇಲೆ ಖಡ್ಗ ಜಳಪಿಸಿದರೆ ಅವರೆಲ್ಲರೂ ನಿರ್ನಾಮವಾಗುತ್ತಾರೆ ಎಂದು ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ  ಸೋಮಶೇಖರ್ ರೆಡ್ಡಿ ಅವರ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನಿನ್ನೆ ಬಳ್ಳಾರಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಬಿಜೆಪಿ ಶಾಸಕ ಸೋಮಶೇಖರ್ ರೆಡ್ಡಿ ವಿರುದ್ಧ ಇಂದು ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ನಾಯಕರು ನೀಡಿದ ದೂರಿನ ಆಧಾರದ ಮೇಲೆ ಬಿಜೆಪಿ ಶಾಸಕರ ವಿರುದ್ಧ ಹಾಗೂ ಕಾರ್ಯಕ್ರಮ ಆಯೋಜಕರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ ಮತ್ತು ಈ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ತೆಗೆದುಕೊಳ್ಳುವುದಾಗಿ ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿಕೆ ಬಾಬಾ ಅವರು ಹೇಳಿದ್ದಾರೆ.

ಇಂದು ಬೆಳಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ  ನೇತೃತ್ವದ ಕಾಂಗ್ರೆಸ್ ನಿಯೋಗ  ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರನ್ನು ಭೇಟಿ ಮಾಡಿ, ಸೋಮಶೇಖರ್ ರೆಡ್ಡಿ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಿ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಮನವಿ ಸಲ್ಲಿಸಿತ್ತು. ಪೊಲೀಸ್ ಮಹಾ  ನಿರ್ದೇಶಕರ ಪರವಾಗಿ ಎಡಿಜಿಪಿ ಡಾ.ಎಂ.ಎ.ಸಲೀಂ ಅವರು ಮನವಿ ಸ್ವೀಕರಿಸಿದ್ದರು.

ಜನವರಿ 3ರಂದು ಬಳ್ಳಾರಿಯ ಗಡಗಿ ಚನ್ನಪ್ಪ ವೃತ್ತದಲ್ಲಿ'ದೇಶಭಕ್ತ ನಾಗರೀಕರ ವೇದಿಕೆ' ವತಿಯಿಂದ ಸಿಎಎ ಹಾಗೂ ಎನ್‌‌ಆರ್ ಸಿ ಪರವಾಗಿ ನಡೆದ ಸಭೆ ಹಾಗೂ ಮೆರವಣಿಗೆಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.