ಆರ್ಥಿಕ ಬಿಕ್ಕಟ್ಟು, ಜೆಡಿ ಎಸ್ ವಕ್ತಾರ ಆತ್ಮಹತ್ಯೆಗೆ ಶರಣು
ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಡುಪಿ: ಆರ್ಥಿಕ ಬಿಕ್ಕಟ್ಟಿನಿಂದ ತೀವ್ರ ಖಿನ್ನತೆಗೆ ಒಳಗಾಗಿದ್ದ ಜೆಡಿಎಸ್ ವಕ್ತಾರ ಪ್ರದೀಪ್ ಜಿ ಬೈಲೂರ್ 37, ಕಳದೆ ರಾತ್ರಿ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲಾ ಜಾತ್ಯತಿತ ಜನತಾ ದಳದ ವಕ್ತಾರ, ಭಿರ್ತಿ ಕೋ. ಅಪರೇಟಿವ್ ಸೊಸೈಟಿಯ ಕಾರ್ಯನಿರ್ವಾಹಣಾಧಿಕಾರಿ ಪ್ರದೀಪ್ ಜಿ. ಬೈಲೂರು (37) ಆತ್ಮಹತ್ಯೆ ಮಾಡಿಕೊಂಡವರು.
ಪ್ರದೀಪ್ ಜಿ ಬೈಲೂರ್ ಹಲವು ವರ್ಷಗಳಿಂದ ಜಿಲ್ಲಾ ಜೆಡಿಯು ವಕ್ತಾರರಾಗಿ ಕೆಲಸ ಮಾಡುತ್ತಿದ್ದರು.
ಪ್ರದೀಪ್ ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದ್ದರು ಎಂದೂ ಹೇಳಲಾಗಿದ್ದು, ಇದರಿಂದಾಗಿ ಅವರು ಈ ದುಡಿಕಿನ ಕ್ರಮ ಕೈಗೊಂಡಿರಬಹುದು ಎಂದು ಶಂಕಿಸಲಾಗಿದೆ.
ನಿನ್ನೆ ರಾತ್ರಿ ಅವರ ತಂದೆ ತಾಯಿ ತೀರ್ಥಹಳ್ಳಿಯ ಮನೆಗೆ ಹೋಗಿದ್ದ ಸಂದರ್ಭ ಕೊರಂಗ್ರಪಾಡಿಯ ಗೇಟ್ ಜಂಕ್ಷನ್ ಬಳಿಯ ತನ್ನ ಬಾಡಿಗೆ ಮನೆಯಲ್ಲಿ ಇದ್ದ ಪ್ರದೀಪ್, ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


