ಕಾಂಗ್ರೆಸ್‌ನಿಂದ ಮತ ಬ್ಯಾಂಕ್ ರಾಜಕಾರಣ: ಗೋವಿಂದ ಕಾರಜೋಳ
ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ತನ್ನ ಮತ ಬ್ಯಾಂಕಿಗಾಗಿ ಅಲ್ಪಸಂಖ್ಯಾತರು, ದೀನದಲಿತರು ಸೇರಿದಂತೆ ಕೆಲ ಸಮುದಾಯಗಳಿಗೆ ತಪ್ಪು ತಿಳುವಳಿಕೆ ಕೊಟ್ಟು ಅವರನ್ನು ಭಯದ ವಾತಾವರಣದಲ್ಲಿಯೇ ಇರುವಂತೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.

ಗದಗ: ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಕಾಂಗ್ರೆಸ್ ತನ್ನ ಮತ ಬ್ಯಾಂಕಿಗಾಗಿ ಅಲ್ಪಸಂಖ್ಯಾತರು, ದೀನದಲಿತರು ಸೇರಿದಂತೆ ಕೆಲ ಸಮುದಾಯಗಳಿಗೆ ತಪ್ಪು ತಿಳುವಳಿಕೆ ಕೊಟ್ಟು ಅವರನ್ನು ಭಯದ ವಾತಾವರಣದಲ್ಲಿಯೇ ಇರುವಂತೆ ಮಾಡಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಆರೋಪಿಸಿದ್ದಾರೆ.
ಗದಗಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯಿದೆ ಜಾರಿಯಿಂದಾಗಿ ದೇಶದ 130 ಕೋಟಿ ಜನರಲ್ಲಿ ಯಾರಿಗೂ ಅನ್ಯಾಯವಾಗುವುದಿಲ್ಲ. ವಿಪಕ್ಷಗಳು ವಿನಾಕಾರಣ ಜನರನ್ನು ಹುಯಿಲೆಬ್ಬಿಸುವುದನ್ನು ಬಿಡಬೇಕು ಎಂದು ಮನವಿ ಮಾಡಿದರು.
ಮಹಾದಾಯಿ ವಿಚಾರದಲ್ಲಿ ಗಡಿಬಿಡಿ ಮಾಡಬಾರದು. ವಿವಾದ ನ್ಯಾಯಾಲಯದ ಮುಂದೆ ಇರುವುದರಿಂದ ಯಾರೂ ಆತುರ ಪಡಬಾರದು. ಕೇಂದ್ರದ ಮಂತ್ರಿಗಳೇ ಕರ್ನಾಟಕಕ್ಕೆ ಮಹಾದಾಯಿ ವಿಚಾರದಲ್ಲಿ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿಗಳು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


