ರಾಜ್ಯ

ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟ; ತಾಯಿ-ಮಗಳು ಸಾವು

ಅಡುಗೆ ಅನಿಲ ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿರುವ ದುರ್ಘಟನೆ ತಾಲೊಕಿನ ಸಂಜೀವರಾಯನ ಕೋಟೆಯಲ್ಲಿ ಸೋಮವಾರ ಬೆಳಗ್ಗೆ ಸಂಭವಿಸಿದೆ.

ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟ; ತಾಯಿ-ಮಗಳು ಸಾವು
ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್ ಸ್ಪೋಟ; ತಾಯಿ-ಮಗಳು ಸಾವು
Published On :

ಬಳ್ಳಾರಿ: ಅಡುಗೆ ಅನಿಲ ಸಿಲಿಂಡರ್  ಸ್ಪೋಟಗೊಂಡು ಒಂದೇ ಕುಟುಂಬದ ಇಬ್ಬರು ಸದಸ್ಯರು ಮೃತಪಟ್ಟಿರುವ ದುರ್ಘಟನೆ ತಾಲ್ಲೂಕಿನ ಸಂಜೀವರಾಯನ ಕೋಟೆಯಲ್ಲಿ  ಸೋಮವಾರ ಬೆಳಗ್ಗೆ ಸಂಭವಿಸಿದೆ.

ಮೃತ ದುರ್ದೈವಿಗಳನ್ನು ತಾಯಿ ಪಾರ್ವರ್ತಿ, ಮಗಳು ಹುಲಿಯಮ್ಮ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಅಡುಗೆಮನೆಯಲ್ಲಿ ತಾಯಿ ಮಗಳು ಬೆಳಗಿನ ಉಪಹಾರ ಸಿದ್ದಪಡಿಸುತ್ತಿದ್ದಾಗ ಅನಿಲ ಸಿಲಿಂಡರ್ ಸ್ಪೋಟಗೊಂಡು  ದುರಂತ ಸಂಭವಿಸಿದೆ.  ಸ್ಪೋಟದ ತೀವ್ರತೆಗೆ ಮನೆಯ ಹೆಚ್ಚಿನ ಭಾಗ ಜಖಂಗೊಂಡಿದ್ದು, ಸ್ಥಳಕ್ಕೆ ದಾವಿಸಿ ರಕ್ಷಣಾ ಕಾರ್ಯಾಚರಣೆ  ಕೈಗೊಂಡಿದ್ದ ಅಗ್ನಿಶಾಮಕ ಸಿಬ್ಬಂದಿ ಅಡುಗೆಮನೆಯಲ್ಲಿ ಸುಟ್ಟು ಕರಕಲಾಗಿದ್ದ ತಾಯಿ-ಮಗಳ ಮೃತ ದೇಹವನ್ನುಹೊರಗೆ  ಸಾಗಿಸಿದ್ದಾರೆ. ಬಳ್ಳಾರಿ ಗ್ರಾಮೀಣ ಪೊಲೀಸರು ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.