ಸಿಎಎ ವಿಚಾರದಲ್ಲಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ- ಉಕ್ಕಿನ ಮಹಿಳೆ ಶರ್ಮಿಳಾ
ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ದೇಶದ ಜನರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಶರ್ಮಿಳಾ ಆರೋಪಿಸಿದ್ದಾರೆ.

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ದೇಶದ ಜನರ ಅಭಿಪ್ರಾಯಗಳನ್ನು ನಿರ್ಲಕ್ಷಿಸಿ ಕೇಂದ್ರ ಸರ್ಕಾರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ ಎಂದು ನಾಗರಿಕ ಹಕ್ಕುಗಳ ಹೋರಾಟಗಾರ್ತಿ ಶರ್ಮಿಳಾ ಆರೋಪಿಸಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆ, ಎನ್ ಆರ್ ಸಿ ಹಾಗೂ ಎನ್ ಪಿಆರ್ ವಿರೋಧಿಸಿ ಟೌನ್ ಹಾಲ್ ಮುಂಭಾಗ ನಡೆದ ಬುರ್ಕಾ ಮತ್ತು ಬಿಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಆಡಳಿತ ನಡೆಸುವವರಿಗೆ ದೇಶದ ಬಗ್ಗೆ ದೂರದೃಷ್ಟಿ ಹೊಂದಿಲ್ಲ. ಜನರು ಪಾಲ್ಗೊಳ್ಳದೆ ಏಕ ಪಕ್ಷೀಯ ಆಡಳಿತ ನಡೆಸಲಾಗುತ್ತಿದೆ ಎಂದು ಟೀಕಿಸಿದರು.
ವೈವಿಧ್ಯೆತೆಯಲ್ಲಿ ಏಕತೆಗೆ ಹೆಸರಾಗಿರುವ ಭಾರತ ರಾಷ್ಟ್ರಗಳ ರಾಷ್ಟ್ರವಾಗಿದೆ. ಜನರ ಭಾವನೆಗಳನ್ನು ಅರ್ಥ ಮಾಡಿಕೊಳ್ಳುವಲ್ಲಿ ಸರ್ಕಾರ ವಿಫಲವಾಗಿದೆ. ಈ ಹಿಂದೆ ಹಿಂದಿ ಭಾಷೆ ಹೇರಲು ಪ್ರಯತ್ನಿಸಿದ ಸರ್ಕಾರ ಇದೀಗ ಎನ್ ಆರ್ ಸಿಯನ್ನು ಜಾರಿಗೆ ತರಲು ಮುಂದಾಗಿದೆ.ವಿವಾದಾತ್ಮಕ ಕಾಯ್ದೆಯನ್ನು ಕೇಂದ್ರ ಸರ್ಕಾರ ಹಿಂಪಡೆಯುವವರೆಗೂ ಜನರ ಹೋರಾಟ ಮುಂದುವರೆಯಲಿದೆ ಎಂದು ಅವರು ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆಯಂತಹ ಕಾನೂನು ಜಾರಿಗೆ ತರುವ ಮೂಲಕ ಜನರನ್ನು ವಿಭಜಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


