ಭಾರತ್ ಬಂದ್ ಗೆ ಪೊಲೀಸ್ ಅನುಮತಿ ಇಲ್ಲ: ಭಾಸ್ಕರ್ ರಾವ್
ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಇದೇ 8ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಮುಷ್ಕರ್, ಮೆರವಣಿಗೆ ಮಾಡಲು ಅನುಮತಿ....

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಇದೇ 8ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಮುಷ್ಕರ್, ಮೆರವಣಿಗೆ ಮಾಡಲು ಅನುಮತಿ ನಿರಾಕರಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್ ಭಾಸ್ಕರ್ ರಾವ್ ಅವರು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶದಾದ್ಯಂತ ಬಂದ್ ಗೆ ಕರೆ ನೀಡಿವೆ.
ಮುಷ್ಕರದ ಹೆಸರಲ್ಲಿ ಮೆರವಣಿಗೆ ನಡೆಸಿದರೆ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತದೆ. ಆದ್ದರಿಂದ ನಗರದಲ್ಲಿ ಮುಷ್ಕರಕ್ಕೆ ಅನುಮತಿ ನೀಡುವುದಿಲ್ಲ. ಮೆರವಣಿಗೆ ಮಾಡಿದರೆ ಕ್ರಮ ಖಚಿತ ಎಂದು ಎಚ್ಚರಿಕೆ ನೀಡಿದರು.
ಒಂದು ವೇಳೆ ಆದೇಶ ಉಲ್ಲಂಘಿಸಿ ಮೆರವಣಿಗೆ ಮಾಡಿದರೆ ಆಯೋಜಕರ ಮೇಲೆ 107 ಸೆಕ್ಷನ್ ಅಡಿ ಮೊಕದ್ದಮೆ ದಾಖಲಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ ಎಂದರು.
ಕೆಲವು ಕಾರ್ಮಿಕ ಸಂಘಟನೆಗಳು ಮೆರವಣಿಗೆ ಮಾಡುವುದಾಗಿ ಅನುಮತಿ ಕೇಳುವುದಕ್ಕೆ ಬಂದಿದ್ದರು. ಆದರೆ, ನಾವು ಅನುಮತಿ ಕೊಡುವುದಿಲ್ಲ ಎಂದು ತಿಳಿಸಿದ್ದೇವೆ. ಏನೇ ಹೋರಾಟ ಮಾಡುವುದಿದ್ದರೂ ಫ್ರೀಡಂ ಪಾರ್ಕಿನಲ್ಲಿ ಮಾಡಬೇಕು ಎಂದರು.
ನಗರದಲ್ಲಿ ದಿನ ಬೆಳಗಾದರೆ ಸಂಚಾರಿ ಒತ್ತಡ ಉಂಟಾಗುತ್ತದೆ. ಇದರಿಂದ ಸಾರ್ವಜನಿಕರಿಗೆ ತೊಂದರೆ ಅಗುತ್ತದೆ. ಇವರು ಮೆರವಣಿಗೆ ಮಾಡಿ ಲಕ್ಷಾಂತರ ಜನರಿಗೆ ತೊಂದರೆ ಕೊಡಲು ಬಿಡುವುದಿಲ್ಲ. ಭಾರತ್ ಬಂದ್ ಬಗ್ಗೆ ನಮಗೆ ಯಾವುದೇ ಮಾಹಿತಿ ಬಂದಿಲ್ಲ. ಒಂದು ವೇಳೆ ಬಂದ್ ಮಾಡಿದರೆ ಅದಕ್ಕೆ ಆಯೋಜಕರೇ ನೇರ ಹೊಣೆಯಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.
ಸುಪ್ರೀಂ ಕೋರ್ಟ್ ಆದೇಶದ ಪ್ರಕಾರ ಷರತ್ತುಗಳಿವೆ. ಏನೇ ಸಣ್ಣ ಘಟನೆಯಾದರೂ ಆಯೋಜಕರ ಮೇಲೆ ದೂರು ದಾಖಲಿಸುತ್ತೇವೆ. ಯಾವುದೇ ಅನಾಹುತವಾದರೂ ಅವರೇ ಅದಕ್ಕೆ ಜವಾಬ್ದಾರರು ಎಂದು ಆಯುಕ್ತರು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


