ಬುಧವಾರ ಭಾರತ್ ಬಂದ್: ವಿವಿಧ ಸಂಘಟನೆಗಳಿಂದ ವ್ಯಾಪಕ ಬೆಂಬಲ
ಜ 6 [ಯುಎನ್ಐ] ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ವಿವಿಧ ಸಂಘಟನೆಗಳು ಬುಧವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.

ಬೆಂಗಳೂರು, ಜ 6 [ಯುಎನ್ಐ] ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ಖಂಡಿಸಿ ವಿವಿಧ ಸಂಘಟನೆಗಳು ಬುಧವಾರ ಭಾರತ್ ಬಂದ್ ಗೆ ಕರೆ ನೀಡಿದ್ದು, ವಿವಿಧ ಸಂಘಟನೆಗಳಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ.
ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಎಐಟಿಯುಸಿ, ಸಿಐಟಿಯು, ಐಎನ್ ಟಿಯುಸಿ, ಎಲ್‌ಪಿಎಫ್ ಸೇರಿದಂತೆ ಇತರೆ ಕಾರ್ಮಿಕ ಸಂಘಟನೆಗಳು ಭಾರೀ ಮಟ್ಟದ ಬಂದ್ ಗೆ ಕರೆ ನೀಡಿವೆ. ಕೈಗಾರಿಕಾ ವ್ಯಾಪಾರ ಒಕ್ಕೂಟಗಳಿಂದ ಹಿಡಿದು ಮಹಿಳಾ ಮತ್ತು ರೈತರ ಸಂಘ-ಸಂಸ್ಥೆಗಳು, ಅನೇಕ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಳ್ಳಲಿವೆ. ವಿವಿಧ ಎಡಪಕ್ಷಗಳು ಮತ್ತು ಕೇಂದ್ರ ವ್ಯಾಪಾರ ಒಕ್ಕೂಟಗಳು ಮುಷ್ಕರಕ್ಕೆ ತಮ್ಮ ಬೆಂಬಲ ಘೋಷಿಸಿವೆ.
ಬಂದ್ ದಿನದಂದು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಎಸ್ಮಾ ಜಾರಿಗೊಳಿಸುತ್ತಿದ್ದು, ತುರ್ತು ಸೇವೆಗಳಾದ ಆಸ್ಪತ್ರೆ, ಔಷಧ ಅಂಗಡಿಗಳು, ಆಂಬುಲೆನ್ಸ್ ಸೇವೆಗಳಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ. ಸರ್ಕಾರಿ ಸಾರಿಗೆ ಸಂಸ್ಥೆಗಳು, ಮೆಟ್ರೋ ಸೇವೆ ಎಂದಿನಂತೆ ಇರಲಿದೆ. ಆದರೆ ಕೆಲವು ಸೇವೆಗಳು ವ್ಯತ್ಯಯವಾಗಲಿವೆ.
ಎಐಟಿಯುಸಿ ಕಾರ್ಮಿಕ ಸಂಘಟನೆಯ ರಾಜ್ಯಾಧ್ಯಕ್ಷ ವಿಜಯಭಾಸ್ಕರ್ ಮಾತನಾಡಿ, ಜ.8ರಂದು ಪುರಭವನದ ಮುಂಭಾಗದಿಂದ ಮೈಸೂರು ಬ್ಯಾಂಕ್ ಮೂಲಕ ಫ್ರಿಂಡ್ ಪಾರ್ಕಗೆ ತಲುಪಿ ಪ್ರತಿಭಟನಾ ಸಭೆ ನಡೆಸುವುದಾಗಿ ತಿಳಿಸಿದರು.
ಸಭೆಯಲ್ಲಿ 21 ಸಾವಿರ ರಾಷ್ಟವ್ಯಾಪಿ ಸಮಾನ ಕನಿಷ್ಟ ವೇತನ ನಿಗದಿ ಪಡಿಸಬೇಕು, ರೈತರ ಬೆಳೆಗಳಿಗೆ ನ್ಯಾಯಯುತ ಬೆಲೆಗಳಿಗಾಗಿ ಡಾ. ಸ್ವಾಮಿನಾಥನ್ ವರದಿ ಜಾರಿ ಮಾಡಬೇಕು, ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಬಲಪಡಿಸುವುದು, ಆರ್ಥಿಕ ಹಿಂಜರಿತಕ್ಕೆ ಕಾರಣವಾಗಿರುವ ನೀತಿಗಳನ್ನು ಕೈಬಿಡಬೇಕು, ಉದ್ಯೋಗ ಸೃಷ್ಟಿ ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸುವುದಾಗಿ ಅವರು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


