ರಾಜ್ಯ

ಎರಡು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು

ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರು ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು.

ಎರಡು ದಿನಗಳ ಭೇಟಿಗಾಗಿ ಬೆಂಗಳೂರಿಗೆ ಆಗಮಿಸಿದ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು
ವೆಂಕಯ್ಯ ನಾಯ್ಡು ಅವರನ್ನು ಸ್ವಾಗತಿಸಿದ ಅಶ್ವಥ್‍ ನಾರಾಯಣ
Published On :

ಬೆಂಗಳೂರು: ಉಪರಾಷ್ಟ್ರಪತಿ ಎಂ ವೆಂಕಯ್ಯನಾಯ್ಡು ಅವರು ಎರಡು ದಿನಗಳ ಅಧಿಕೃತ ರಾಜ್ಯ ಭೇಟಿಗಾಗಿ ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದರು.

ನಗರದ ಎಚ್.ಎ.ಎಲ್ ವಿಮಾನ ನಿಲ್ದಾಣದಲ್ಲಿ ಉಪರಾಷ್ಟ್ರಪತಿ ಅವರನ್ನು ಉಪ ಮುಖ್ಯಮಂತ್ರಿ ಡಾ: ಸಿ. ಎನ್. ಅಶ್ವಥ್‍ ನಾರಾಯಣ ಆತ್ಮೀಯವಾಗಿ ಬರಮಾಡಿಕೊಂಡರು.

ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸದಸ್ಯ ಪಿ. ಸಿ. ಮೋಹನ್, ಬೆಂಗಳೂರು ಮಹಾಪೌರರಾದ ಗೌತಮ್‍ಕುಮಾರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರರಾವ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಬಿ.ಆರ್. ರವಿಕಾಂತೇಗೌಡ ಅವರು ಈ ಸಂದರ್ಭದಲ್ಲಿ ಹಾಜರಿದ್ದರು.

ಉಪ ರಾಷ್ಟ್ರಪತಿ ಅವರು ನಾಳೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು ಬೆಳಗ್ಗೆ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಅವರ ಬೃಂದಾವನ ಭೇಟಿ, ಅದಮ್ಯ ಚೇತನ ಹಸಿರು ಅಡುಗೆ ಮನೆಗೆ ಭೇಟಿ ಕೊಡಲಿದ್ದಾರೆ.

ರಾಜಭವನದಲ್ಲಿ ಹಮ್ಮಿಕೊಂಡಿರುವ “ನ್ಯಾಕ್ ” ಬೆಳ್ಳಿಹಬ್ಬ ನಂತರ ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ಹಮ್ಮಿಕೊಂಡಿರುವ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.