ಅತ್ಯಾಚಾರದ ವಿಡಿಯೋ ಮಾಡಿ ಮತಾಂತರಕ್ಕೆ ಯತ್ನ: ಬೆಂಗಳೂರಿನಲ್ಲಿ ಓರ್ವನ ಬಂಧನ
ಕೇರಳದ ಕಾಸರಗೋಡು ಜಿಲ್ಲೆಯ ಮೊರ್ಗಾಲ್ ಪುತ್ತೂರು ಗ್ರಾಮದ ಹಿಂದೂ ಯುವತಿ ಹಾಗೂ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಕೇರಳದ ಕಾಸರಗೋಡು ಜಿಲ್ಲೆಯ ಮೊರ್ಗಾಲ್ ಪುತ್ತೂರು ಗ್ರಾಮದ ಹಿಂದೂ ಯುವತಿ ಹಾಗೂ ಕುಟುಂಬವನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಹೊಂದುವಂತೆ ಒತ್ತಾಯ ಮಾಡುತ್ತಿದ್ದ ಆರೋಪಿಯನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೇರಳ ಮೂಲದ ರಿಷಬ್, ಅನ್ಸರ್ ಬಂಧಿತ ಆರೋಪಿ. ರಿಷಬ್ ಯುವತಿಯನ್ನು ಬೆಂಗಳೂರಿಗೆ ಕರೆತಂದು ಸ್ನೇಹದ ಸೋಗಿನಲ್ಲಿ ಮತ್ತು ಬರಿಸುವ ಪಾನೀಯವನ್ನು ಯುವತಿಗೆ ಕುಡಿಸಿದ್ದ. ನಂತರ ಈಕೆಯ ಮೇಲೆ ಅತ್ಯಾಚಾರ ನಡೆಸಿದ್ದ. ಅಲ್ಲದೆ, ಅತ್ಯಾಚಾರ ನಡೆಸಿದ್ದನ್ನು ಚಿತ್ರೀಕರಣ ಮಾಡಲಾಗಿತ್ತು.
ಇದೇ ವಿಡಿಯೋ ಇಟ್ಟುಕೊಂಡು ಯುವತಿಯನ್ನು ಇಸ್ಲಾಂ ಧರ್ಮಕ್ಕೆ ಮತಾಂತರ ಆಗುವಂತೆ ಅತ್ಯಾಚಾರಿ ಒತ್ತಡ ಹೇರುತ್ತಿದ್ದ. ಒಂದೊಮ್ಮೆ ಮತಾಂತರಗೊಳ್ಳದಿದ್ದರೆ ವಿಡಿಯೋ ಬಹಿರಂಗ ಮಾಡುವುದಾಗಿ ಬೆದರಿಕೆ ಹಾಕಿದ್ದ.
ರಿಷಬ್ ಬೆಂಗಳೂರಿಗೆ ಬಂದಾಗ ಆತನಿಗೆ ಉಳಿಯಲು ಅನ್ಸರ್ ತನ್ನ ಮನೆಯಲ್ಲೇ ಜಾಗ ಕೊಟ್ಟಿದ್ದ. ಮೂರು ದಿನಗಳಕಾಲ ರಿಷಬ್ ಯುವತಿಯನ್ನು ಇಲ್ಲಿಯೇ ಇಟ್ಟುಕೊಂಡಿದ್ದ. ಈ ವೇಳೆ ಅತ್ಯಾಚಾರ ನಡೆದಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅನ್ಸರ್ನನ್ನು ಬಂಧಿಸಲಾಗಿದ್ದು, ರಿಷಬ್ ಬಗ್ಗೆ ವಿಚಾರಣೆ ನಡೆಸಲಾಗುತ್ತಿದೆ.
ಈ ಬಗ್ಗೆ ಕಾಸರಗೋಡಿನಲ್ಲಿ ದೂರು ನೀಡಿದ್ದರೂ ಕೇರಳ ಪೊಲೀಸರು ಕ್ರಮ ಕೈಗೊಂಡಿರಲಿಲ್ಲ. ಅತ್ಯಾಚಾರವೆಸಗಿ ಮತಾಂತರಕ್ಕೆ ಒತ್ತಡ ಹೇರಿದ ಯುವಕರು ಬೆಂಗಳೂರಿನಲ್ಲಿ ನೆಲೆಸಿರುವ ಕಾರಣ ಸಂತ್ರಸ್ತ ಯುವತಿ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿದ್ದರು.
ಈ ಸಂಬಂಧ ಸಂತ್ರಸ್ತೆ ಜೊತೆ ತೆರಳಿ ಪೊಲೀಸ್ ಕಮಿಷನರ್ಗೆ ಶೋಭಾ ಕರಂದ್ಲಾಜೆ ದೂರು ನೀಡಿದ್ದರು. ದೂರು ಆಧಿರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


