ರಾಜ್ಯ

ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ನೆರೆ ಪರಿಹಾರ: ಸಾಕಾ, ಇನ್ನೂ ಬೇಕಾ?

ನೆರೆಯಿಂದ ಹಾನಿಗೊಳಗಾದ 7 ರಾಜ್ಯಗಳಿಗೆ ಹೆಚ್ಚುವರಿ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ದೊರೆತಿದೆ. ಆದರೆ, ನೆರೆಯಿಂದಾದ ಅಂದಾಜು ನಷ್ಟಕ್ಕೆ ಈ ಪರಿಹಾರ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ.

ಕೇಂದ್ರದಿಂದ ರಾಜ್ಯಕ್ಕೆ ಹೆಚ್ಚಿನ ನೆರೆ ಪರಿಹಾರ: ಸಾಕಾ, ಇನ್ನೂ ಬೇಕಾ?
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನೆರೆಯಿಂದ ಹಾನಿಗೊಳಗಾದ 7 ರಾಜ್ಯಗಳಿಗೆ ಹೆಚ್ಚುವರಿ ಆರ್ಥಿಕ ನೆರವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕಕ್ಕೆ ಸಿಂಹಪಾಲು ದೊರೆತಿದೆ. ಆದರೆ, ನೆರೆಯಿಂದಾದ ಅಂದಾಜು ನಷ್ಟಕ್ಕೆ ಈ ಪರಿಹಾರ ಸಾಕಾಗುವುದಿಲ್ಲ ಎನ್ನಲಾಗುತ್ತಿದೆ.

Story image

ಕರ್ನಾಟಕಕ್ಕೆ 1869 ಕೋಟಿ ರೂ. ಹೆಚ್ಚುವರಿ ಆರ್ಥಿಕ ನೆರವನ್ನು ಬಿಡುಗಡೆ ಮಾಡಲಾಗಿದೆ.ಆದರೆ, ಇದು  ಹಾನಿಗೊಳಗಾದ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ಕೈಗೊಳ್ಳಲು ಸಾಕಾಗುತ್ತಿಲ್ಲ.ಪ್ರವಾಹ ಬಾಧಿತ ಪ್ರದೇಶಗಳಲ್ಲಿ ಪರಿಹಾರ ಮತ್ತು ಪುನರ್ ವಸತಿ ಕಾರ್ಯ ಕೈಗೊಳ್ಳಲು ಹೆಚ್ಚಿನ ನೆರವು ಬೇಕೆಂದು ರಾಜ್ಯ ಕಂದಾಯ ಇಲಾಖೆಯ ವಿಪತ್ತು ನಿರ್ವಹಣಾ ಘಟಕ ಕೇಂದ್ರ ಸರ್ಕಾರದ ಮೇಲೆ ಕಳೆದ ಆಕ್ಟೋಬರ್ ತಿಂಗಳಿನಿಂದಲೂ ಒತ್ತಡ ಹೇರುತ್ತಲೇ ಬಂದಿದೆ. 

ರಾಜ್ಯದಲ್ಲಿ ಸುಮಾರು 38 ಸಾವಿರ ಕೋಟಿಯಷ್ಟು ಹಾನಿಯಾಗಿದೆ. ಖಾಸಗಿ ಕಟ್ಟಡಗಳನ್ನು ಹೊರತುಪಡಿಸಿದಂತೆ ಅಂದಾಜು ಮಾಡುವಂತೆ ಕೇಂದ್ರ ಸರ್ಕಾರ ಸೂಚಿಸಿದ ನಂತರ ಒಟ್ಟಾರೇ ನಷ್ಟದ ಅಂದಾಜು 35 ಸಾವಿರ ಕೋಟಿ ರೂ. ನಷ್ಟಾಗಿದೆ. 

ಕೇಂದ್ರ ಸರ್ಕಾರ ಅಳೆದು ತೂಗಿ ಕೊನೆಗೂ ರಾಜ್ಯಕ್ಕೆ ನೆರೆ ಪರಿಹಾರದ ಹಣ ಕೊಟ್ಟಿದೆ. ನೆರೆ ಪರಿಹಾರವಲ್ಲದೇ ರಾಜ್ಯಕ್ಕೆ ನ್ಯಾಯೋಚಿತವಾಗಿ ಬರಬೇಕಾದ ಅನುದಾನ ಸಾಕಷ್ಟಿದೆ. ತೆರಿಗೆ ಪಾಲು, ನರೇಗಾ ಅನುದಾನ, ಬರ ಪರಿಹಾರ ಇವುಗಳನ್ನೆಲ್ಲ ಯಾವಾಗ ಕೊಡುತ್ತಿರಿ ಮೋದಿ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.