ರಾಜ್ಯ

ಭಾರತ್ ಬಂದ್: ಹಲವೆಡೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಸಾಗಿದ ಜನಜೀವನ

ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂಗ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಹಲವೆಡೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ.

ಭಾರತ್ ಬಂದ್: ಹಲವೆಡೆ ನೀರಸ ಪ್ರತಿಕ್ರಿಯೆ, ಎಂದಿನಂತೆ ಸಾಗಿದ ಜನಜೀವನ
ಸಂಗ್ರಹ ಚಿತ್ರ
Published On :

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ಖಂಡಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ ನೀಡಿರುವ ದೇಶವ್ಯಾಪಿ ಮುಷ್ಕರಕ್ಕೆ ರಾಜ್ಯದಲ್ಲಿ ಕಾರ್ಮಿಕ ಸಂಘಟನೆಗಳಿಂಗ ಸಂಪೂರ್ಣ ಬೆಂಬಲ ವ್ಯಕ್ತವಾಗಿದ್ದು, ಹಲವೆಡೆ ನೀರಸ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. 

ಬಂದ್ ಹಿನ್ನೆಲೆಯಲ್ಲಿ ಬ್ಯಾಂಕಿಂಗ್ ಸೇವೆಗಳಲ್ಲಿ ವ್ಯತ್ಯಯಗಳು ಕಂಡು ಬರುತ್ತಿದ್ದು, ಇನ್ನುಳಿದಂತೆ ಕೆಲ ಸಂಘಟನೆಗಳು ಹಾಗೂ ಸಂಸ್ಥೆಗಳು ನೈತಿಕ ಬೆಂಬಲ ಸೂಚಿಸಿದ್ದರಿಂದಾಗಿ ತಮ್ಮ ಸೇವೆಗಳನ್ನು ಎಂದಿನಂತೆ ಮುಂದುವರೆಸಿವೆ. ಮುಷ್ಕರದ ಹೊರತಾಗಿಯೂ ಜನಜೀವನ ಎಂದಿನಂತೆ ಸಾಗುತ್ತಿರುವುದು ಕಂಡು ಬರುತ್ತಿವೆ. 

ಇನ್ನು ಶಾಲಾ, ಕಾಲೇಜುಗಳು ಪರಿಸ್ಥಿತಿ ಆಧರಿಸಿ ರಜೆ ಘೋಷಣೆ ನಿರ್ಧಾರ ತೆಗೆದುಕೊಳ್ಳುವ ಅಧಿಕಾರವನ್ನು ಜಿಲ್ಲಾಧಿಕಾರಿುಗಳಿಗೆ ಸರ್ಕಾರ ನೀಡಿದ್ದು, ಸಾರಿಗೆ ಸೇವೆಯಲ್ಲಿ ಆಟೋ ಸಂಘಟನೆಗಳ ಹೊರತಾಗಿ ಉಳಿದೆಲ್ಲವೂ ಕೇಲವ ನೈತಿಕ ಬೆಂಬಲ ನೀಡಿವೆ. ಹೀಗಾಗಿ ಬಸ್, ಮೆಟ್ರೋ, ಕ್ಯಾಬ್ ಸೇರಿದಂತೆ ಸಾರಿಗೆ ಸೇವೆ ಸಾಮಾನ್ಯವಾಗಿರಬಹುದು. ಆಟೋ ಸೇವೆಯಲ್ಲಿ ಕೊಂಚ ವ್ಯತ್ಯಗಳು ಕಂಡು ಬರುತ್ತಿವೆ. 

ಇನ್ನುಳಿದಂತೆ ಹೋಟೆಲ್, ಆಸ್ಪತ್ರೆ, ಆ್ಯಂಬುಲೆನ್ಸ್ ಔಷಧ, ದಿನಸಿ ಹಾಗೂ ತರಕಾರಿ ಮಾರುಕಟ್ಟೆ ಹಾಲು ಸೇರಿದಂತೆ ಸರಕು ಸಾಗಣೆ ಸಾಮಾನ್ಯವಾಗಿವೆ. 

ಕೆಎಸ್ಆರ್'ಟಿಸಿ, ಬಿಎಂಟಿಸಿ ಸೇರಿದಂತೆ ರಸ್ತೆ ಸಾರಿಗೆ ನಿಗಮಗಳ ನೌಕರರ ಸಂಘಟನೆಗಳು ಈ ಮುಷ್ಕರಕ್ಕೆ ಬೆಂಬಲ ಸೂಚಿಸಿವೆ. ಆದರೆ, ಬಸ್ ಸೇವೆಯಲ್ಲಿ ವ್ಯತ್ಯಯಗಳು ಕಂಡು ಬಂದಿಲ್ಲ. ಮೆಟ್ರೋ ರೈಲು, ಮೊಬೈಲ್ ಆ್ಯಪ್ ಆಧಾರಿತ ಓಲಾ, ಉಬರ್, ಪ್ರವಾಸಿ ವಾಹನಗಳು, ಸರಕು ಸಾಗಣೆ ಲಾರಿ ಮಾಲೀಕರ ಸಂಘಟನೆಗಳು ಮುಷ್ಕರಕ್ಕೆ ಬಾಹ್ಯ ಬೆಬಲ ಮಾತ್ರ ಗೋಷಮೆ ಮಾಡಿವೆ. ರಾಜಧಾನಿ ಬೆಂಗಳೂರಿನಲ್ಲಿ ಆಟೋರಿಕ್ಷಾ ಚಾಲಕರ ಸಂಘಟನೆಗಳ ಪೈಕಿ ಕೆಲ ಸಂಘಟನೆಗಳು ಬೆಂಬಲ ಸೂಚಿಸಿ ಸೇವೆ ಸ್ಥಗಿತಗೊಳಿಸಲು ತೀರ್ಮಾನಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.