ಸ್ಮಶಾನದಲ್ಲಿ ಮಕ್ಕಳ ಹುಟ್ಟುಹಬ್ಬ ಆಚರಿಸಿದ ತಂದೆ!
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ತಮ್ಮ ಮಗಳ ಹುಟ್ಟು ಹಬ್ಬವನ್ನು ಸ್ಮಶಾನದಲ್ಲಿ ಆಚರಿಸುವ ಮೂಲಕ ಮೌಡ್ಯಕ್ಕೆ ಸೆಡ್ಡು ಹೊಡೆದಿದ್ದಾರೆ ಇಂಗಳಿ ಗ್ರಾಮದ ಮಹೇಶ ಶಿಂಗೆ.

ಚಿಕ್ಕೋಡಿ: ತಮ್ಮ ಮಕ್ಕಳ ಹುಟ್ಟುಹಬ್ಬವನ್ನು ಭರ್ಜರಿಯಾಗಿ ಹೋಟೆಲ್ ದಲ್ಲಿ ಅಥವಾ ಮನೆಯಲ್ಲಿ ಆಚರಿಸುವುದು ಸಾಮಾನ್ಯ ಸಂಗತಿ. ಆದರೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ತಮ್ಮ ಮಗಳ ಹುಟ್ಟು ಹಬ್ಬವನ್ನು ಸ್ಮಶಾನದಲ್ಲಿ ಆಚರಿಸುವ ಮೂಲಕ ಮೌಡ್ಯಕ್ಕೆ ಸೆಡ್ಡು ಹೊಡೆದಿದ್ದಾರೆ ಇಂಗಳಿ ಗ್ರಾಮದ ಮಹೇಶ ಶಿಂಗೆ.
ಕಾಂಗ್ರೆಸ್ ಮುಖಂಡ ಯಮನಮರಡಿ ಶಾಸಕ ಸತೀಶ ಜಾರಕಿಹೊಳಿ ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತನಾಗಿರುವ ಮಹೇಶ ಶಿಂಗೆ, ತಮ್ಮ ಮಗಳ ಹುಟ್ಟುಹಬ್ಬವನ್ನು ಸ್ಮಶಾನಲ್ಲಿ ಆಚರಿಸಿ ಮಾಡ್ಯಕ್ಕೆ ಸೆಡ್ಡು ಹೊಡಿದಿದ್ದಾರೆ.
ಮಹೇಶ ಶಿಂಗೆ ತಮ್ಮ ಮಗಳಾದ ಜೀಜಾಬಾಯಿ ಹುಟ್ಟುಹಬ್ಬವನ್ನು ಸ್ಮಶಾನದಲ್ಲಿ ಆಚರಿಸಿದ್ದು, ಸ್ಮಶಾನದಲ್ಲಿ ಹುಟ್ಟುಹಬ್ಬದ ಸಂಭ್ರಮವನ್ನು ಸಂತಸ ವ್ಯಕ್ತಪಡಿಸಿದ್ದಾರೆ. ಸ್ಮಶಾನದಲ್ಲಿ ಹಾಡು,ಮಾತು, ಚರ್ಚೆಯೊಂದಿಗೆ ಉಪಾಹಾರ ಸೇವಿಸಿ ಸಂಭ್ರಮಿಸಿದ್ದಾರೆ.
ಈ ಸಂದರ್ಭದಲ್ಲಿ ಮಾನವ ಬಂದುತ್ವ ವೇದಿಕೆ ರಾಜ್ಯ ಸಂಚಾಲಕ ರವಿಂದ್ರ ನಾಯ್ಕರ,ತಾ.ಪಂ ಸದಸ್ಯ ಹೂವಣ್ಣಾ ಚೌಗಲೆ, ಮುನ್ನಾ ಬಾಗವಾನ್, ಜೀವನ ಮಾಂಜರೇಕರ್, ಗಾಯತ್ರಿ ಮಾಳಗಿ ಆನಂದ ಗೋಕಾಕ್, ಪುಂಡಲೀಕ ದನವಾಡೆ ಸೇರಿದಂತೆ ನೂರಾರು ಮಾನವ ಬಂಧುತ್ವ ವೇದಿಕೆ ಕಾರ್ಯಕರ್ತರು ಮತ್ತು ದಲಿತ ಮುಖಂಡರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


