ರಾಜ್ಯ

ಬಿಎಂಟಿಸಿ ಬಸ್ ಬ್ರೇಕ್ ಫೇಲ್; ಸರಣಿ ಅಪಘಾತ, 6 ಕಾರುಗಳು ಜಖಂ, ಇಬ್ಬರಿಗೆ ಗಾಯ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆದ ಬಿಎಂಟಿಸಿ ಬಸ್ ಆರು ಕಾರುಗಳಿಗೆ ಢಿಕ್ಕಿ ಹೊಡೆದಿದೆ.

ಬಿಎಂಟಿಸಿ ಬಸ್ ಬ್ರೇಕ್ ಫೇಲ್; ಸರಣಿ ಅಪಘಾತ, 6 ಕಾರುಗಳು ಜಖಂ, ಇಬ್ಬರಿಗೆ ಗಾಯ
ಸರಣಿ ಅಪಘಾತ
Published On :

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಅಪಘಾತ ಸಂಭವಿಸಿದ್ದು, ಬ್ರೇಕ್ ಫೇಲ್ ಆದ ಬಿಎಂಟಿಸಿ ಬಸ್ ಆರು ಕಾರುಗಳಿಗೆ ಢಿಕ್ಕಿ ಹೊಡೆದಿದೆ.

ಹೌದು.. ಜಯನಗರದ ಈಸ್ಟ್ ಎಂಡ್ ವೃತ್ತದ ಸಮೀಪದಲ್ಲಿ ಶುಕ್ರವಾರ ಸರಣಿ ಅಪಘಾತ ಸಂಭವಿಸಿದ್ದು, ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ. ಬಿಎಂಟಿಸಿ ಬಸ್ ವೊಂದು ಬ್ರೇಕ್ ಫೇಲ್ ಆಗಿ ಸಮೀಪದಲ್ಲಿ ನಿಂತಿದ್ದ ಆರು ಕಾರುಗಳಿಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದಿಂದಾಗಿ ಸ್ಥಳದಲ್ಲಿ ವಾಹನಗಳ ಸಂಚಾರ ಬಂದ್ ಆಗಿತ್ತು. ವಿಪರೀತ ದಟ್ಟಣೆಯೂ ಉಂಟಾಯಿತು. ಜಯನಗರ ಪೊಲೀಸರು ಸ್ಥಳಕ್ಕೆ ಬಂದು ಜಖಂಗೊಂಡಿದ್ದ ಬಸ್ ಹಾಗೂ ಕಾರುಗಳನ್ನು ಸ್ಥಳಾಂತರಿಸಿದರು.

ಘಟನೆಯಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಕೂಡ ಜಖಂ ಆಗಿದೆ ಎಂದು ತಿಳಿದುಬಂದಿದೆ. ಇತ್ತೀಚೆಗೆ ಸುಮ್ಮನಹಳ್ಳಿ ಬಳಿಯೂ ಸರಣಿ ಅಪಘಾತ ಸಂಭವಿಸಿತ್ತು. ಅದರ ನೆನಪು ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿದೆ. ಇತ್ತೀಚೆಗೆ ಸುಮ್ಮನಹಳ್ಳಿ ಬಳಿಯೂ ಸರಣಿ ಅಪಘಾತ ಸಂಭವಿಸಿತ್ತು. ಅದರ ನೆನಪು ಮಾಸುವ ಮುನ್ನವೇ ಮತ್ತೊಂದು ಅಪಘಾತ ನಡೆದಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.