'ಸಪ್ತಪದಿ' ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಚಾಲನೆ
ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಲಾಂಛನ ಹಾಗೂ ಕರಪತ್ರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬಿಡುಗಡೆಗೊಳಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.

ಬೆಂಗಳೂರು: ದುಂದುವೆಚ್ಚಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಸಪ್ತಪದಿ ಸಾಮೂಹಿಕ ವಿವಾಹ ಕಾರ್ಯಕ್ರಮದ ಲಾಂಛನ ಹಾಗೂ ಕರಪತ್ರವನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಬಿಡುಗಡೆಗೊಳಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು.
ಈ ಯೋಜನೆಯಡಿ ವಿವಾಹವಾಗುವ ವಧುವಿಗೆ ಸರ್ಕಾರದಿಂದ 10 ಸಾವಿರ ರೂ. ಪ್ರೋತ್ಸಾಹ ಧನ ಹಾಗೂ ಮಂಗಳಸೂತ್ರಕ್ಕಾಗಿ 40 ಸಾವಿರ ರೂಪಾಯಿ ನೀಡಲಾಗುತ್ತದೆ. ವರನಿಗೆ 5 ಸಾವಿರ ರೂಪಾಯಿ ನೀಡಲಾಗುವುದು. ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಲಿರುವ ದೇವಾಲಯಗಳ ಕಿರುಪಟ್ಟಿಯನ್ನು ಮುಜರಾಯಿ ಮಾಡಲಿದೆ ಎಂದು ಸರ್ಕಾರ ಮಾಹಿತಿ ನೀಡಿದೆ.
ಮುಸ್ಲಿಂ, ಕ್ರಿಶ್ಚಿಯನ್ ಸಮುದಾಯದವರಿಗೂ ಅವರ ಸಂಪ್ರದಾಯದಂತೆ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಏರ್ಪಡಿಸಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕಳೆದ ನವೆಂಬರ್ ಸರ್ಕಾರ ಹೊರಡಿಸಿದ ಮಾರ್ಗಸೂತ್ರದ ಪ್ರಕಾರ, ಸಾಮೂಹಿಕ ವಿವಾಹವಾಗಬಯಸುವವರ ಪೋಷಕರು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಾಗುತ್ತದೆ. ಒಂದು ವೇಳೆ ಪೋಷಕರ ಅನುಮತಿ ಪಡೆಯದೆ ಈ ಯೋಜನೆಯನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ. ಪ್ರೀತಿಸಿ ಮದುವೆಯಾಗುವವರಿಗೂ ಈ ಯೋಜನೆಯ ಪ್ರಯೋಜನ ಪಡೆಯಲು ಸಾಧ್ಯವಿಲ್ಲ. 90ರಿಂದ 100 ದೇವಾಲಯಗಳಲ್ಲಿ 1 ಸಾವಿರ ವಿವಾಹವೇರ್ಪಡಿಸುವ ಚಿಂತನೆ ನಡೆಸಲಾಗಿದೆ.
ದೇವಾಲಯಗಳಲ್ಲಿ ಸಾಮೂಹಿಕ ವಿವಾಹ ಮಹೋತ್ಸವ ನಡೆಯುವ ಮುನ್ನ 30 ತಿಂಗಳೊಳಗೆ ವಧು ವರರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕಾಗುತ್ತದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


