ವಾಹನ ನೋಂದಣಿ ಫಲಕಗಳ ಮೇಲೆ ಹೆಸರು, ಚಿಹ್ನೆ ಹಾಕಿಸುವುದು ಅಪರಾಧ: ಸಾರಿಗೆ ಇಲಾಖೆ
ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಪ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರನ್ನು ಹೋಲುವಂತಹ ರಾಪ್ಟ್ರೀಯ-ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು, ಚಿಹ್ನೆ, ಲಾಂಛನಗಳನ್ನು ಹಾಕಿಕೊಳ್ಳುವುದನ್ನು ಅಪರಾಧ ಎಂದು ಸಾರಿಗೆ ಇಲಾಖೆ ತಿಳಿಸಿದೆ.

ಬೆಂಗಳೂರು: ವಾಹನಗಳ ನೋಂದಣಿ ಫಲಕಗಳ ಮೇಲೆ ಅನಧಿಕೃತವಾಗಿ ರಾಪ್ಟ್ರೀಯ ಮಾನವ ಹಕ್ಕುಗಳ ಆಯೋಗ, ರಾಜ್ಯ ಮಾನವ ಹಕ್ಕುಗಳ ಆಯೋಗಗಳ ಹೆಸರನ್ನು ಹೋಲುವಂತಹ ರಾಪ್ಟ್ರೀಯ-ರಾಜ್ಯ ಮಾನವ ಹಕ್ಕುಗಳ ಸಂಸ್ಥೆ, ಒಕ್ಕೂಟ ಇತ್ಯಾದಿ ಹೆಸರುಗಳನ್ನು, ಚಿಹ್ನೆ, ಲಾಂಛನಗಳನ್ನು ಹಾಕಿಕೊಳ್ಳುವುದನ್ನು ಅಪರಾಧ ಎಂದು ಸಾರಿಗೆ ಇಲಾಖೆ ತಿಳಿಸಿದೆ.
ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ತಮ್ಮ ಖಾಸಗಿ ವಾಹನದ ಮೇಲೆ ಸದಸ್ಯತ್ವವನ್ನು ಮತ್ತು ಇತರೆ ಸಂಘ ಸಂಸ್ಥೆಗಳ ಹೆಸರುಗಳನ್ನು ಹಾಕಿಕೊಳ್ಳುವುದು ಕೇಂದ್ರ ಮೋಟಾರು ವಾಹನಗಳ ನಿಯಮ 1989ರ ನಿಯಮ 50 ಮತ್ತು 51ರ ಹಾಗೂ 1950 ಕಲಂ 3,4ರ ಉಲ್ಲಂಘನೆಯಾಗಲಿದೆ ಎಂದು ಉಚ್ಛ ನ್ಯಾಯಾಲಯದ ಆದೇಶದನ್ವಯ ಅಪರಾಧವಾಗಿದೆ.
ಆದ್ದರಿಂದ ಅನಧಿಕೃತ ನೋಂದಣಿ ಫಲಕಗಳನ್ನು ಕೂಡಲೇ ತೆರವುಗೊಳಿಸುವಂತೆ ವಾಹನ ಮಾಲೀಕರಿಗೆ ಸಾರಿಗೆ ಇಲಾಖೆ ಸೂಚಿಸಿದೆ. ಅಲ್ಲದೆ ಅನಧಿಕೃತ ನೋಂದಣಿ ಫಲಕಗಳನ್ನು ಅಳವಡಿಸಿಕೊಂಡಿರುವ ವಾಹನವು ಸಾರ್ವಜನಿಕ ಸ್ಥಳದಲ್ಲಿ ಕಂಡು ಬಂದಲ್ಲಿ ಸಾರ್ವಜನಿಕರು ಅದರ ನೋಂದಣಿ ಫಲಕ ಸಮೇತ ಭಾವಚಿತ್ರವನ್ನು ತೆಗೆದುಕೊಂಡು 9449863459 ಸಂಖ್ಯೆಗೆ ವಾಟ್ಸ್ ಅಪ್ ಮಾಡಿದಲ್ಲಿ ಅಂತಹ ವಾಹನ ವಿರುದ್ಧ ನಿಯಮಾನುಸಾರ ಸೂಕ್ರ ಕ್ರಮ ಕೈಗೊಳ್ಳಲಾಗುವುದು ಎಂದು ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


