ರಾಜ್ಯದ ತಾಲ್ಲೂಕು ಹಂತದ ಆಸ್ಪತ್ರೆಯಲ್ಲಿ ಮೊದಲ ಪ್ರಕರಣ: ಮೊಣಕಾಲು ಚಿಪ್ಪು ಬದಲಾವಣೆ
ರಾಜ್ಯದಲ್ಲಿ ಮೊದಲ ಬಾರಿಗೆ ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಮೊಣಕಾಲು ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿ ಯಾಗಿ ಮಾಡಲಾಗಿದೆ.

ಗಂಗಾವತಿ: ರಾಜ್ಯದಲ್ಲಿ ಮೊದಲ ಬಾರಿಗೆ ಇಲ್ಲಿನ ಸರ್ಕಾರಿ ಉಪ ವಿಭಾಗ ಆಸ್ಪತ್ರೆಯಲ್ಲಿ ಮೊಣಕಾಲು ಚಿಪ್ಪು ಬದಲಾವಣೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿ ಯಾಗಿ ಮಾಡಲಾಗಿದೆ.
ವಯೋಸಹಜ ಹಾಗೂ ಅತಿಯಾದ ಮೊಣಕಾಲಿನ ಮೇಲಿನ ಒತ್ತಡದಿಂದಾಗಿ ಸವೆಯುವ ಮೊಣಕಾಲು ಚಿಪ್ಪಿನ ಬದಲಾವಣೆ ( ಟೋಟಲ್ ನೀ ರಿಪ್ಲೇಸ್‌ಮೆಂಟ್) ಶಸ್ತ್ರಚಿಕಿತ್ಸೆಯನ್ನು ಇಬ್ಬರು ರೋಗಿಗಳಿಗೆ ಇಲ್ಲಿನ ಸರ್ಕಾರಿ ಆಸ್ಪತ್ರೆಯ ವೈದ್ಯರು ಮಾಡಿದ್ದಾರೆ.
"ಆಯುಷ್ಮಾನ್ ಭಾರತ ಯೋಜನೆಯಡಿ ಹೊಸಪೇಟೆ ತಾಲ್ಲೂಕಿ ಗ್ರಾಮೀಣ ಭಾಗದ ಶಾರದಮ್ಮ ಹಾಗೂ ಗಂಗಾವತಿಯ ಸಿದ್ದಪ್ಪ ಪೂಜಾರಿ ಎಂಬ ಇಬ್ಬರು ಹಿರಿಯರಿಗೆ ಈ ಚಿಕಿತ್ಸೆ ನೆರವೇರಿಸಲಾಗಿದೆ" ಎಂದು ಆಸ್ಪತ್ರೆಯ ಆಡಳಿತಾಧಿಕಾರಿ ಈಶ್ವರ ಸವುಡಿ ತಿಳಿಸಿದ್ದಾರೆ.
ಸುಮಾರು ಐದು ಗಂಟೆಗಳ ಕಾಲ ನಡೆದ ಶಸ್ತ್ರ ಚಿಕಿತ್ಸೆಯಲ್ಲಿ ವೈದ್ಯರಾದ ಸಲಾವುದ್ದೀನ್, ರೇಣುಕಾರಾಧ್ಯ, ಸುಜಾತ, ಶಿವರಾಜ ಪಾಟೀಲ್ ಪಾಲ್ಗೊಂಡಿದ್ದರು.
ಈಗಾಗಲೆ ಹತ್ತಾರು ಅಧುನಿಕ ವೈದ್ಯ ಸೌಲಭ್ಯ, ಸತತ ಎರಡು ಬಾರಿ ಕೇಂದ್ರ ಸರ್ಕಾರದ ಕಾಯಕಲ್ಪ ಪ್ರಶಸ್ತಿ ಪಡೆದ ರಾಜ್ಯದ ಏಕೈಕ ತಾಲ್ಲೂಕು ಆಸ್ಪತ್ರೆ ಎಂಬ ಖ್ಯಾತಿವೆತ್ತ ಆಸ್ಪತ್ರೆ ಈಗ ಮತ್ತೊಂದು ಮೈಲಿಗಲ್ಲು ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


