ರಾಜ್ಯ

ಬೆಂಗಳೂರು: ಸ್ಕೂಟರ್‌ಗೆ ಲಾರಿ ಡಿಕ್ಕಿ; ತಾಯಿ ಸಾವು, ಮಗ ಗಂಭೀರ

ಸ್ಕೂಟರ್‌ವೊಂದಕ್ಕೆ ಅಡುಗೆ ಅನಿಲ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ತಾಯಿ ಮೃತಪಟ್ಟರೆ, ಮಗ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿರುವ ದುರ್ಘಟನೆ ಯಶವಂತಪುರ ಎಂಇಎಸ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ

ಬೆಂಗಳೂರು: ಸ್ಕೂಟರ್‌ಗೆ ಲಾರಿ ಡಿಕ್ಕಿ; ತಾಯಿ ಸಾವು, ಮಗ ಗಂಭೀರ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಸ್ಕೂಟರ್‌ವೊಂದಕ್ಕೆ ಅಡುಗೆ ಅನಿಲ ಲಾರಿ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್‌ನಲ್ಲಿದ್ದ ತಾಯಿ ಮೃತಪಟ್ಟರೆ, ಮಗ ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿರುವ ದುರ್ಘಟನೆ  ಯಶವಂತಪುರ ಎಂಇಎಸ್ ರಿಂಗ್ ರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ನೆಲಗದರನಹಳ್ಳಿಯ  ಮುತ್ಯಾಲಮ್ಮ (45)ಮೃತಪಟ್ಟವರು. ಅವರ ಪುತ್ರ ಮುರಳಿ  ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ

ಮುತ್ಯಾಲಮ್ಮ ಅವರು ಜಾಲಹಳ್ಳಿಯ ಸಂಬಂಧಿಕರ ಮನೆಗೆ ರಾತ್ರಿ ಪುತ್ರ ಮುರಳಿಯ ಸ್ಕೂಟರ್‌ನಲ್ಲಿ ಹಿಂದೆ ಕುಳಿತುಕೊಂಡು ನೆಲಗದರನಹಳ್ಳಿಯಿಂದ  ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. 


ಕೆಳಗೆ ಬಿದ್ದು ತಲೆಗೆ ಗಂಭೀರವಾಗಿ  ಗಾಯಗೊಂಡಿದ್ದ ಮುತ್ಯಾಲಮ್ಮ ಅವರನ್ನು ಕೂಡಲೇ ಎಂಎಸ್ ರಾಮಯ್ಯ ಆಸ್ಪತ್ರೆಗೆ  ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.