ಗೋಡ್ಸೆ ಮಾದರಿಯಲ್ಲಿ ಮೋದಿಯಿಂದ ಸಂವಿಧಾನಕ್ಕೆ ಗುಂಡಿಕ್ಕುವ ಪ್ರಯತ್ನ: ದೇವನೂರು ಮಹಾದೇವ
ದೇಶದ ಸಂವಿಧಾನಕ್ಕೆ ನಮಸ್ಕರಿಸಿ ಪ್ರಧಾನಿ ಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಇಂದು ಅದೇ ಸಂವಿಧಾನಕ್ಕೆ ಗೋಡ್ಸೆ ಮಾದರಿಯಲ್ಲಿ ಗುಂಡಿಕ್ಕುವ ಪ್ರಯತ್ನ ಮಾಡಿದ್ದಾರೆಂದು ಹಿರಿಯ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಗಂಭೀರ ಆರೋಪ ಮಾಡಿದ್ದಾರೆ.

ಮಡಿಕೇರಿ: ದೇಶದ ಸಂವಿಧಾನಕ್ಕೆ ನಮಸ್ಕರಿಸಿ ಪ್ರಧಾನಿ ಪಟ್ಟ ಅಲಂಕರಿಸಿದ ನರೇಂದ್ರ ಮೋದಿ ಅವರು ಇಂದು ಅದೇ ಸಂವಿಧಾನಕ್ಕೆ ಗೋಡ್ಸೆ ಮಾದರಿಯಲ್ಲಿ ಗುಂಡಿಕ್ಕುವ ಪ್ರಯತ್ನ ಮಾಡಿದ್ದಾರೆಂದು ಹಿರಿಯ ಸಾಹಿತಿ ಹಾಗೂ ಚಿಂತಕ ದೇವನೂರು ಮಹಾದೇವ ಗಂಭೀರ ಆರೋಪ ಮಾಡಿದ್ದಾರೆ.
ಪ್ರಗತಿಪರರ ಜನಾಂದೋಲನ ವೇದಿಕೆ ವತಿಯಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಶನಿವಾರ ನಡೆದ ಪೌರತ್ವ ಕಾಯ್ದೆ ವಿರುದ್ಧದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಎ ಕಾಯ್ದೆ ಕುರಿತು ಆತಂಕ ವ್ಯಕ್ತಪಡಿಸಿದರು.
ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ನಮಸ್ಕರಿಸಿದ ಬಳಿಕ ಎದೆಗೆ ಗುಂಡಿಟ್ಟು ಹತ್ಯೆ ಮಾಡಿದ ಗೋಡ್ಸೆ ಮಾದರಿಯಲ್ಲಿ, ಅಧಿಕಾರಕ್ಕೆ ಏರುವ ಹಂತದಲ್ಲಿ ಮೋದಿ ಅವರು ಸಂವಿಧಾನಕ್ಕೆ ನಮಿಸಿ, ಇದೀಗ ಎನ್ ಆರ್ ಸಿ, ಸಿಎಎ ಕಾಯ್ದೆಗಳ ಮೂಲಕ ಅದೇ ಸಂವಿಧಾನಕ್ಕೆ ಗುಂಡಿಕ್ಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಮಹದೇವ ದೇವನೂರು ಆರೋಪಿಸಿದರು.
ಜನರಿಂದ ಆಯ್ಕೆಯಾಗಿ ಬಂದ ಪ್ರಧಾನಿ ಇಂದು ಅದೇ ಜನರ ಪೌರತ್ವವನ್ನು ಪ್ರಶ್ನಿಸುತ್ತಿರುವುದು ದುರಂತ ಎಂದು ಹೇಳಿದ ದೇವನೂರು, ಕಾಯ್ದೆ ಜಾರಿಯಾದರೆ ಅರಣ್ಯ ವಾಸಿಗಳ ಪಾಡೇನು ಎಂದು ಆತಂಕ ವ್ಯಕ್ತಪಡಿಸಿದರು. ಇಂದು ದೇಶದಲ್ಲಿ ಕೇವಲ ಶೇ. 1 ರಷ್ಟಿರುವ ಕೋಮುವಾದಿಗಳು ಹಾಗೂ ಶೇ.99 ರಷ್ಟು ಇರುವ ಭಾರತೀಯರ ನಡುವೆ ಹೋರಾಟ ನಡೆಯುತ್ತಿದೆ ಎಂದು ತಿಳಿಸಿದರು.
ಈ ದೇಶದ ಪೌರತ್ವ ಹೊಂದಿದ ಮತದಾರರು ನೀಡಿದ ಮತಗಳಿಂದಲೇ ಇವರು ಪ್ರಧಾನಿಗಳಾಗಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಪೌರತ್ವವನ್ನು ಖಾತರಿ ಪಡಿಸಿ ಎಂದು ಹೇಳುತ್ತಿರುವುದು ವಿಪರ್ಯಾಸ ಎಂದು ದೇವನೂರು ಮಹಾದೇವ ಹೇಳಿದರು. ಇದು ದೇಶದ ಭವಿಷ್ಯದ ಪ್ರಶ್ನೆಯಾಗಿರುವುದರಿಂದ ವಿದ್ಯಾರ್ಥಿ ಸಮೂಹ ನ್ಯಾಯಕ್ಕಾಗಿ ಹೋರಾಟಕ್ಕೆ ಇಳಿಯಕೆಂದು ದೇವನೂರು ಅವರು ಕರೆ ನೀಡಿದರು. ಜಿಲ್ಲೆಯ ವಿವಿಧ ಭಾಗಗಳಿಂದ ಸಾವಿರಾರು ಜನರು ಕಾರ್ಯಕ್ರಮಕ್ಕೆ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


