ಹಿರಿಯ ಸಾಹಿತಿ ಚಿಮೂ ನಿಧನಕ್ಕೆ ನಾಡಿನ ಗಣ್ಯರ ಸಂತಾಪ
ಕನ್ನಡದ ಹಿರಿಯ ಸಾಹಿತಿ ಡಾ ಎಂ ಚಿದಾನಂದ ಮೂರ್ತಿಯವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ ಡಾ ಎಂ ಚಿದಾನಂದ ಮೂರ್ತಿಯವರ ನಿಧನಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಟ್ವೀಟ್ ಮಾಡಿ, ಕನ್ನಡಕ್ಕೆ ಮಿಡಿಯುತ್ತಿದ್ದ, ಲೇಖಕ, ಸಂಶೋಧಕ, ಚಿಂತಕ, ಇತಿಹಾಸಕಾರರಾಗಿದ್ದ ಚಿ.ಮೂ ಇನ್ನಿಲ್ಲದ ವಿಷಯ ನೋವಿನದ್ದು ಮತ್ತು ಅವರ ಸ್ಥಾನ ಅನನ್ಯ, ಯಾರೂ ತುಂಬಲಾಗದು ಎಂದಿದ್ದಾರೆ.
ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್, ಚಿದಾನಂದ ಮೂರ್ತಿಯವರ ಆತ್ಮಕ್ಕೆ ಶಾಂತಿ ದೊರಕಲಿ ಎಂದಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ, ಹಿರಿಯ ಸಾಹಿತಿ, ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದುಃಖವಾಯಿತು. ಅವರ ಸಂಶೋಧನೆ ಮತ್ತು ಸಾಹಿತ್ಯದ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಮೀರಿದ ಸ್ನೇಹ ಶೀಲ ಗುಣವನ್ನೂ ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.
ಹಿರಿಯ ಸಾಹಿತಿ,ಸಂಶೋಧಕ ಡಾ.ಎಂ.ಚಿದಾನಂದ ಮೂರ್ತಿ ನಿಧನದ ಸುದ್ದಿ ತಿಳಿದು ದು:ಖವಾಯಿತು.
ಅವರ ಸಂಶೋಧನೆ ಮತ್ತು ಸಾಹಿತ್ಯದ ಜೊತೆಯಲ್ಲಿ ಅವರ ನೇರ ನಡೆ-ನುಡಿ, ಸೈದ್ಧಾಂತಿಕ ಭಿನ್ನಾಭಿಪ್ರಾಯವನ್ನು ಮೀರಿದ ಸ್ನೇಹ ಶೀಲ ಗುಣವನ್ನೂ
ನಾಡು ಸದಾ ಸ್ಮರಿಸುತ್ತದೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು. pic.twitter.com/VDFzUwiekx
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹ, ಸಾಹಿತಿಗಳಾದ ಎಸ್ ಎಲ್ ಭೈರಪ್ಪ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಹಲವರು ಕಂಬನಿ ಮಿಡಿದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


