ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ : ಸನಾತನ ಸಂಸ್ಥೆ
ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ.

ಪಣಜಿ: ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸನಾತನ ಸಂಸ್ಥೆ ಹೇಳಿದೆ.
ಗೌರಿ ಲಂಕೇಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಪೊಲೀಸರು ರಿಷಿಕೇಶ್ ದೇವದಿಕರ್ ಅವರನ್ನು ಬಂಧಿಸಿದ್ದಾರೆ ಎಂದು ನಮಗೆ ತಿಳಿದಿದೆ ಅವರನ್ನು ಜಾರ್ಖಂಡ್‌ನಲ್ಲಿ ಬಂಧಿಸಲಾಯಿತು. ನಾವು ಈ ವಿಷಯದ ಬಗ್ಗೆ ಹೆಚ್ಚಿನ ವಿಚಾರಣೆಗೆ ಮುಂದಾಗಿದ್ದೇವೆ” ಎಂದು ಸನಾತನ ಸಂಸ್ಥೆಯ ರಾಷ್ಟ್ರೀಯ ವಕ್ತಾರ ಚೇತನ್ ರಾಜನ್ಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
“ಮಾಹಿತಿಯ ಪ್ರಕಾರ, ದೇವದಿಕರ್ ಕೆಲವು ವರ್ಷಗಳ ಹಿಂದೆ ನಮ್ಮ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು; ಆದರೆ ಅವರು ಕಳೆದ ಎಂಟು-ಹತ್ತು ವರ್ಷಗಳಿಂದ ಸಕ್ರಿಯವಾಗಿಲ್ಲ.
ಈ ಮಧ್ಯೆ ಬೇರೆ ಯಾವುದೋ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ನಮಗೆ ತಿಳಿದಿತ್ತು. ಸನಾತನ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಯಾರಾದರೂ ಈಗ ಪ್ರಕರಣವೊಂದರಲ್ಲಿ ಬಂಧನಕ್ಕೊಳಗಾದಾಗ ಸನಾತನ ಸಂಸ್ಥೆಯನ್ನು ದೂಷಿಸುವುದು ಸಂಪೂರ್ಣವಾಗಿ ಸೂಕ್ತವಲ್ಲ.
ಸನಾತನ ಸಂಸ್ಥೆಯು ಆಧ್ಯಾತ್ಮಿಕತೆಯನ್ನು ಹರಡುವ ಕೆಲಸವನ್ನು ಮಾಡುತ್ತದೆ. ಸನಾತನ್ ಸಂಸ್ಥೆಯು ಈ ಪತ್ರಿಕಾ ಪ್ರಕಟಣೆಯ ಮೂಲಕ ಯಾವುದೇ ಕೊಲೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸುತ್ತದೆ, ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


