ರಾಜ್ಯ

ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ

ಗ್ರಾಮ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ.

ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್: ಎರಡು ಹಂತದಲ್ಲಿ ಮತದಾನ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಿದ್ದು, ರಾಜ್ಯದಲ್ಲಿ ಎರಡು ಹಂತದಲ್ಲಿ ಗ್ರಾಮ ಪಂಚಾಯತ್ ಗಳಿಗೆ ಚುನಾವಣೆ ನಡೆಯಲಿದೆ.

ಎಪ್ರಿಲ್ 5 ರಂದು ಮೊದಲ ಹಂತದ ಮತದಾನ ಮತ್ತು ಎಪ್ರಿಲ್ 9ರಂದು ಎರಡನೇ ಹಂತದ ಮತದಾನ ನಡೆಯಲಿದೆ. 

ಮೊದಲ ಹಂತದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಹಾಸನ, ಮೈಸೂರು, ಮಂಡ್ಯ, ಮಡಿಕೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಗ್ರಾಮ ಪಂಚಾಯತ್ ಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಉತ್ತರ ಕರ್ನಾಟಕ ಮತ್ತು ಕರಾವಳಿ ಕರ್ನಾಟಕದಲ್ಲಿ ಎರಡನೇ ಹಂತದಲ್ಲಿ ಎಪ್ರಿಲ್ 9ರಂದು ಚುನಾವಣೆ ನಡೆಯಲಿದೆ ಎಂದು ಅಧಿಸೂಚನೆಯಲ್ಲಿ ಪ್ರಕಟಿಸಿದೆ

ಈ ಬಾರಿಯೂ ಗ್ರಾಮ ಪಂಚಾಯತ್ ಗಳಿಗೆ ಇ.ವಿ.ಎಂ ಬಳಸಿ ಚುನಾವಣೆ ನಡೆಯಲಿದೆ. ಈ ಬಾರಿಯೂ ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.