ಒಮಾನ್ ದೊರೆ ನಿಧನ: ನಾಳೆ ಕರ್ನಾಟಕದಲ್ಲಿಯೂ ಶೋಕಾಚರಣೆ, ಮನರಂಜನಾ ಕಾರ್ಯಕ್ರಮ ರದ್ದು
ಒಮಾನ್ ನ ದೊರೆ ಸುಲ್ತಾನ್ ಕಬೂಸ್ ಬಿನ್ ಸೈದ್ ಅವರ ನಿಧನದ ಗೌರವಾರ್ಥ ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನಾಳೆ ಶೋಕಾಚರಣೆ ಇರಲಿದೆ

ನವದೆಹಲಿ: ಒಮಾನ್ ನ ದೊರೆ ಸುಲ್ತಾನ್ ಕಬೂಸ್ ಬಿನ್ ಸೈದ್ ಅವರ ನಿಧನದ ಗೌರವಾರ್ಥ ಕೇಂದ್ರ ಸರಕಾರ ಸೋಮವಾರ ಒಂದು ದಿನದ ಶೋಕಾಚರಣೆ ಘೋಷಿಸಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ನಾಳೆ ಶೋಕಾಚರಣೆ ಇರಲಿದೆ
ನಾಳೆ ಯಾವುದೇ ಅಧಿಕೃತ ಮನರಂಜನಾ ಕಾರ್ಯಕ್ರಮ ಇರುವುದಿಲ್ಲ. ನಿಯತವಾಗಿ ರಾಷ್ಟ್ರಧ್ವಜವನ್ನು ಹಾರಿಸಲ್ಪಡುವ ಸರ್ಕಾರದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶದಲ್ಲಿ ತಿಳಿಸಿದೆ.
ಒಮಾನ್ ನ ದೊರೆ ಜನವರಿ 10ರಂದು ತಮ್ಮ 79ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


