ಬೆಂಗಳೂರು: ಕೋಟಿ ವೃಕ್ಷ ಆಂದೋಲನಕ್ಕೆ ಅಲಸೂರು ಕೆರೆಯಲ್ಲಿ ಚಾಲನೆ
ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.

ಬೆಂಗಳೂರು: ಬೆಂಗಳೂರನ್ನು ಉದ್ಯಾನ ನಗರಿಯನ್ನಾಗಿ ಪುನರ್ ಸ್ಥಾಪಿಸಲು ಮುಂದಾಗಿರುವ ಬಿಬಿಎಂಪಿ ಹಾಗೂ ಸಾರ್ವಜನಿಕರು ಶನಿವಾರ ಅಲಸೂರು ಕೆರೆ ವ್ಯಾಪ್ತಿಯಲ್ಲಿ ಅರಣ್ಯ ಬೆಳೆಸುವ ಕಾಯಕಕ್ಕೆ ಮುಂದಾಗಿದ್ದಾರೆ. ಅನೇಕ ನಾಗರಿಕರು ಮತ್ತು ಸರ್ಕಾರಿ ಅಧಿಕಾರಿಗಳು ಈ ಕಾರ್ಯಕ್ಕೆ ಕೈಜೋಡಿಸಿದ್ದಾರೆ.
ಕೆರೆ ಸುತ್ತಲೂ 1 ಕಿ.ಮೀ ಉದ್ದದವರೆಗೆ ಸುಮಾರು 8,000 ಸಸಿಗಳನ್ನು 2 ಸಾವಿರ ನಾಗರಿಕರು, ವಿವಿಧ ಎನ್‌ಜಿಒಗಳ ಸ್ವಯಂಸೇವಕರು, ಕಾರ್ಪೊರೇಟರ್‌ಗಳು, ಬಿಬಿಎಂಪಿ ಅಧಿಕಾರಿಗಳು ಮತ್ತು ಆಯುಕ್ತ ಬಿ.ಎಚ್ ಅನಿಲ್ ಕುಮಾರ್ ಮತ್ತು ಮೇಯರ್ ಎಂ ಗೌತಮ್ ಕುಮಾರ್ ಅವರುಗಳು ನೆಟ್ಟು ಬೆಂಗಳೂರಿನ ವನಸಿರಿಯನ್ನು ಬೆಳೆಸಲು ಮುಂದಾಗಿದ್ದಾರೆ.
ನಗರವನ್ನು ಹಸಿರಾಗಿ ಮಾಡಲು "ಕೋಟಿ ವೃಕ್ಷ ಆಂದೋಲನ"ಸೈನ್ಯದ ಸಂಸ್ಥಾಪಕ ಟಿ.ವಿ.ಸುರಭಿ, ಈ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಬೆಂಗಳೂರಿನಾದ್ಯಂತ ಸಣ್ಣ ದಟ್ಟ ಕಾಡುಗಳನ್ನು ರಚಿಸುವುದು ಇದರ ಉದ್ದೇಶವಾಗಿದೆ ಎಂದು ಅವರು ಹೇಳಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


