ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ: ಶಾಸಕ ಮಹೇಶ್
ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್ ಮಹೇಶ್ ಹೇಳಿದ್ದಾರೆ.

ಮೈಸೂರು: ದೇಶದಾದ್ಯಂತ ಜಾರಿಗೆ ತರಲು ಉದ್ದೇಶಿಸಿರುವ ಎನ್ಆರ್'ಸಿಗೆ ಸಹಕಾರ ನೀಡುವುದಿಲ್ಲ ಎಂದು ಮಾಜಿ ಸಚಿವ ಹಾಗೂ ಶಾಸಕ ಎನ್ ಮಹೇಶ್ ಹೇಳಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಬಿಎಸ್'ಪಿ ಬೆಂಬಲಿತ ವಿದ್ಯಾರ್ಥಿಗಳು ನಡೆಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಸಹಕಾರ ಚಳುವಳಿಯನ್ನು ಆರಂಭಿಸುವ ಅಗತ್ಯವಿದೆ. ಕಳೆದ 64 ವರ್ಷಗಳಿಂದ ಈ ಭೂಮಿಯಲ್ಲಿ ಜನಿಸಿದ್ದೇನೆ. ನನ್ನ ಪೌರತ್ವದ ಬಗ್ಗೆ ಪ್ರಶ್ನಿಸುವ ಹಕ್ಕು ಅವರಿಗಿಲ್ಲ ಎಂದು ಹೇಳಿದ್ದಾರೆ.
ಅಲ್ಲದೆ, ಎನ್ಆರ್'ಸಿಯನ್ನು ನೋಟು ನಿಷೇಧಕ್ಕೆ ಹೋಲಿಕೆ ಮಾಡಿರುವ ಅವರು, ಕೆಲ ಅಕ್ರಮ ವಲಸಿಗರನ್ನು ಗುರುತಿಸುವ ಸಲುವಾಗಿ ಕೋಟ್ಯಾಂತರ ಜನರಿಗೆ ಸಮಸ್ಯೆಯುಂಟು ಮಾಡುವುದು ಅಸಂಬದ್ಧ ಎಂದು ತಿಳಿಸಿದ್ದಾರೆ.
ಫ್ರೀ ಕಾಶ್ಮೀರ ನಾಮಫಲಕ ಹಿಡಿದ ಪ್ರಕರಣದಲ್ಲಿ ಪೊಲೀಸರು ತ್ವರಿಗತಿಯಲ್ಲಿ ಕ್ರಮ ಕೈಗೊಂಡಿದ್ದಾರೆ. ಆದರೆ, ದಲಿತರ ಮೇಲೆ ನಡೆದ ದೌರ್ಜನ್ಯ ಪ್ರಕರಣದಲ್ಲಿ ಇನ್ನೂ ಪ್ರಗತಿ ಕಂಡಿಲ್ಲ ಎಂದು ಕಿಡಿಕಾರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


