ಅಮಿತ್ ಶಾ ವಿರುದ್ಧ ಕಾಂಗ್ರೆಸ್‌ನಿಂದ "ಗೋ ಬ್ಯಾಕ್ ಅಮಿತ್ ಶಾ' ಚಳವಳಿ
ವಿವೇಕಾದೀಪಿಕಾ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ವಿರುದ್ಧ 'ಅಮಿತ್ ಶಾ ಗೋ ಬ್ಯಾಕ್ " ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.

ಹುಬ್ಬಳ್ಳಿ: ವಿವೇಕಾದೀಪಿಕಾ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ಆಗಮಿಸುತ್ತಿರುವ ಅಮಿತ್ ಶಾ ವಿರುದ್ಧ 'ಅಮಿತ್ ಶಾ ಗೋ ಬ್ಯಾಕ್ " ಪ್ರತಿಭಟನೆ ನಡೆಸಲು ಕಾಂಗ್ರೆಸ್ ಸಮಿತಿ ನಿರ್ಧರಿಸಿದೆ.
ಇದೇ ತಿಂಗಳ 18ರಂದು ಸಿಎಎ ಪರವಾಗಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಲ್ಲಿಗೆ ಆಗಮಿಸುತ್ತಿರುವ ಬಿಜೆಪಿ ಮುಖ್ಯಸ್ಥ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಧಾರವಾಡ ನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಮತ್ತು ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿ, 'ಅಮಿತ್ ಶಾ ಗೋ ಬ್ಯಾಕ್ " ಪ್ರತಿಭಟನೆ ನಡೆಸಲು ಮತ್ತು ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿವೆ.
ನಾವು ಮಂಗಳವಾರದಿಂದಲೇ ' ಅಮಿತ್ ಶಾ ಬರಬೇಡಿ ' ಅಭಿಯಾನವನ್ನು ಪ್ರಾರಂಭಿಸುತ್ತೇವೆ. ಜನವರಿ 18 ರಂದು ನಡೆಯಲಿರುವ ಪ್ರತಿಭಟನೆಯ ವಿವರಗಳನ್ನು ಒಂದೆರಡು ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಧಾರವಾಡ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅನಿಲ್ ಕುಮಾರ್ ಪಾಟೀಲ್ ಮಂಗಳವಾರ ಇಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಮಹದಾಯಿ ನ್ಯಾಯಮಂಡಳಿಯ ತೀರ್ಪನ್ನು ಕೇಂದ್ರ ಸರ್ಕಾರ ಇನ್ನೂ ಗೆಜೆಟ್‌ನಲ್ಲಿ ಪ್ರಕಟಿಸಿಲ್ಲ. ರಾಜ್ಯದಲ್ಲಿ ಪ್ರವಾಹ ಪರಿಹಾರ ಕಾರ್ಯಕ್ಕಾಗಿ ಕೇಂದ್ರದಿಂದ ಸಮರ್ಪಕ ಪರಿಹಾರ ಸಿಕ್ಕಿಲ್ಲ. ತನ್ನ ವೈಫಲ್ಯ ಮರೆಮಾಚಲು ಸಿಎಎ, ಎನ್ಆರ್ ಸಿ ಮೂಲಕ ಇಡೀ ದೇಶವನ್ನು ವಿಭಜಿಸಲು ಬಿಜೆಪಿ ಸರ್ಕಾರ ಮುಂದಾಗಿದೆ. ಇದೇ ಕಾರಣಕ್ಕೆ ಅಮಿತ್ ಶಾ ಹುಬ್ಬಳ್ಳಿಗೆ ಭೇಟಿ ನೀಡುವುದನ್ನು ನಾವು ವಿರೋಧಿಸುತ್ತೇವೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


