ಸೋಮಶೇಖರ್ ಮನೆ ಮುಂದೆ ಪ್ರತಿಭಟನೆ: ಜಮೀರ್ ಅಹಮದ್ ಪೊಲೀಸರ ವಶಕ್ಕೆ
ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲು ಬರುತ್ತಿದ್ದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಬಳ್ಳಾರಿ: ಶಾಸಕ ಸೋಮಶೇಖರ ರೆಡ್ಡಿ ಮನೆ ಮುಂದೆ ಪ್ರತಿಭಟನೆ ನಡೆಸಲು ಬರುತ್ತಿದ್ದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಸಿಎಎ ಪರ ರ್ಯಾಲಿಯಲ್ಲಿ ಸೋಮಶೇಖರ್ ರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಇದನ್ನು ವಿರೋಧಿಸಿ ಜಮೀರ್ ಇಂದು ಸೋಮಶೇಖರ್ ರೆಡ್ಜಿ ಮನೆ ಮುಂದೆ ಪ್ರತಿಭಟನೆ ನಡೆಸಲು ಆಗಮಿಸುತ್ತಿದ್ದರು. ಇದೇ ವೇಳೆ ಬಂದ ಪೊಲೀಸರು ಜಮೀರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ಪ್ರತಿಭಟನೆ ನಡೆಸಲು ಜಮೀರ್ ಅಹ್ಮದ್ ಅವರಿಗೆ ಅನುಮತಿ ನೀಡಿರಲಿಲ್ಲ. ಯಾವುದೇ ಪ್ರತಿಭಟನೆ ಮಾಡುವ ಮುನ್ನ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆಯಬೇಕು , ಆದರೆ ಈವರೆಗೂ ಜಮೀರ್ ಅಹ್ಮದ್ ಕಡೆಯವರು ಅನುಮತಿ ಪಡೆದುಕೊಂಡಿಲ್ಲಾ ಎಂಬ ಕಾರ ಣಕ್ಕೆ ಜಮೀರ್ ಅವರನ್ನು ಬಳ್ಳಾರಿ ಹೊರವಲಯದಲ್ಲಿ ವಶಕ್ಕೆ ಪಡೆದುಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


