ಧಾರವಾಡ: ಕಾರು - ವ್ಯಾನ್ ಮುಖಾಮುಖಿ ಡಿಕ್ಕಿ, ಸ್ಥಳದಲ್ಲೇ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ
ಕಾರು ಹಾಗೂ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಂಗಳವಾರ ನಗರದ ಹೊರವಲಯದಲ್ಲಿ ನಡೆದಿದೆ.

ಧಾರವಾಡ: ಕಾರು ಹಾಗೂ ವ್ಯಾನ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಗು ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದು, ಇತರ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ಮಂಗಳವಾರ ನಗರದ ಹೊರವಲಯದಲ್ಲಿ ನಡೆದಿದೆ.
ಧಾರವಾಡ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ೪ರ ಯರಿಕೊಪ್ಪದಲ್ಲಿ ಈ ಅಪಘಾತ ಸಂಭವಿಸಿದೆ.
ಮೃತ ದುರ್ದೈವಿಗಳನ್ನು ಕೊಪ್ಪಳದ ಭಾಗ್ಯನಗರ ವಾಸಿಗಳಾದ ರುದ್ರಪ್ಪ ಮರಿಕುರಿ, ಈರಮ್ಮ ಮರಿಕುರಿ, ಮಂಜುನಾಥ ಮರಿಕುರಿ ಹಾಗೂ ಶಿವಾನಂದ್ ಅಲ್ವಾಡಿ ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕಲ್ಪಿಸಲಾಗುತ್ತಿದೆ.
ಕೊಪ್ಪಳದ ಆರು ಮಂದಿ ಬೆಳಗಾವಿಗೆ ಕಾರಿನಲ್ಲಿ ತೆರಳುತ್ತಿದ್ದರು, ಎದುರಿಗೆ ಬಂದ ವ್ಯಾನ್, ಕಾರು ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಎರಡು ವರ್ಷದ ಮಗು ಶಿವಾನಂದ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠ ವರ್ತಿಕಾ ಕಟಿಯಾರ್ ಹೇಳಿದ್ದಾರೆ.
ಈರಮ್ಮ ಎಂಬುವವರ ಚಿಕಿತ್ಸೆಗಾಗಿ ಕೊಪ್ಪಳ ಜಿಲ್ಲೆ ಗಂಗಾವತಿ ಮೂಲದ ರುದ್ರಪ್ಪ ಮರಿಕುರಿ ಕಾರಿನಲ್ಲಿ ಕರೆದುಕೊಂಡು ಹೋಗುತ್ತಿದ್ದರು. ಈ ವೇಳೆ ಬೆಳಗಾವಿಯಿಂದ ಹುಬ್ಬಳ್ಳಿ ಕಡೆಗೆ ಹೊರಟಿದ್ದ ವ್ಯಾನ್ ಎದುರಿನಿಂದ ಬಂದು ಡಿಕ್ಕಿ ಹೊಡೆದಿದೆ ಎಂದು ಪ್ರತ್ಯಕ್ಷ ದರ್ಶಿಗಳು ಹೇಳಿದ್ದಾರೆ.
ಈ ಸಂಬಂಧ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


