ಬೆಂಗಳೂರು:150 ಕೋಟಿ ರು. ಸಾಲ ಕೊಡಿಸುವುದಾಗಿ ಬಿಜೆಪಿ ಮುಖಂಡನಿಗೆ ವಂಚನೆ
150 ಕೋಟಿ ಸಾಲ ಕೊಡಿಸುವ ಆಮಿಷವೊಡ್ಡಿ ಶುಲ್ಕದ ಹೆಸರಿನಲ್ಲಿ ಬಿಜೆಪಿ ಮುಖಂಡರೊಬ್ಬರಿಗೆ ₹ 4.25 ಕೋಟಿ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: 150 ಕೋಟಿ ಸಾಲ ಕೊಡಿಸುವ ಆಮಿಷವೊಡ್ಡಿ ಶುಲ್ಕದ ಹೆಸರಿನಲ್ಲಿ ಬಿಜೆಪಿ ಮುಖಂಡರೊಬ್ಬರಿಗೆ ₹ 4.25 ಕೋಟಿ ಪಡೆದು ವಂಚಿಸಲಾಗಿದ್ದು, ಈ ಸಂಬಂಧ ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಜೆಪಿ ಮುಖಂಡ ಎಚ್.ರವೀಂದ್ರ ಎಂಬುವರು ದೂರು ನೀಡಿದ್ದಾರೆ. ಆರೋಪಿಗಳಾದ ಚೆನ್ನೈನ ಹರಿಗೋಪಾಲ್ ಕೃಷ್ಣನ್ ನಾಡರ್, ರಂಜನ್, ಮುಬಾರಕ್, ರಂಜಿತ್ ಫಣಿಕರ್ ಹಾಗೂ ಅಭಿಷೇಕ್ ಗುಪ್ತಾ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.
‘ರವೀಂದ್ರ ಅವರಿಗೆ ಲೇಔಟ್ ವಿಚಾರದಲ್ಲಿ ಹಣದ ಅವಶ್ಯಕತೆ ಇತ್ತು. ಈ ಬಗ್ಗೆ ಸ್ನೇಹಿತರ ಜೊತೆ ಚರ್ಚಿಸಿದ್ದರು. ಅವರ ಮೂಲಕವೇ ಹರಿಗೋಪಾಲ್ ಕೃಷ್ಣನ್ ನಾಡರ್ ಅವರ ಪರಿಚಯ ಆಗಿತ್ತು. ಕಡಿಮೆ ಬಡ್ಡಿ ದರದಲ್ಲಿ ₹150 ಕೋಟಿ ಸಾಲ ಕೊಡಿಸುವುದಾಗಿ ಅವರು ಹೇಳಿದ್ದರು’ ಎಂದರು.
‘ಕೇರಳದ ತೊಡುಪುಲ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಕರಾರುಪತ್ರ ಮಾಡಿಸಿದ್ದ ಆರೋಪಿಗಳು, ಅದರ ಶುಲ್ಕವೆಂದು ರವೀಂದ್ರ ಅವರಿಂದ ₹ 3.25 ಕೋಟಿ ಪಡೆದುಕೊಂಡಿದ್ದರು. ಬಳಿಕವೂ ಶುಲ್ಕವೆಂದು ₹1 ಕೋಟಿ ಪಡೆದುಕೊಂಡಿದ್ದರು. ಇದಾದ ಬಳಿಕವೂ ಚೆಕ್ ಸಹ ಪಡೆದುಕೊಂಡಿದ್ದಾರೆ. ಈ ಬಗ್ಗೆ ರವೀಂದ್ರ ಅವರು ದೂರಿನಲ್ಲಿ ತಿಳಿಸಿದ್ದಾರೆ’ ಎಂದು ಪೊಲೀಸರು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


