ರಾಜ್ಯ

ಮೈಸೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿ- ಇಬ್ಬರು ಸಾವು

ನಗರದ ಬಿಳಿಕೆರೆ ಸಮೀಪದ ಹುಲ್ಲೇನಹಳ್ಳಿ ಪೆಟ್ರೋಲ್ ಬಂಕ್ ಸಮೀಪ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮೈಸೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿ- ಇಬ್ಬರು ಸಾವು
ಸಾಂದರ್ಭಿಕ ಚಿತ್ರ
Published On :

ಮೈಸೂರು: ನಗರದ ಬಿಳಿಕೆರೆ ಸಮೀಪದ ಹುಲ್ಲೇನಹಳ್ಳಿ ಪೆಟ್ರೋಲ್ ಬಂಕ್ ಸಮೀಪ ಎರಡು ಕಾರುಗಳ ನಡುವೆ ಡಿಕ್ಕಿ ಸಂಭವಿಸಿ ಇಬ್ಬರು ಮೃತಪಟ್ಟಿದ್ದು, ಮೂವರು ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ.

ಕಾರ್ ವೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಎದುರಿನಿಂದ ಬರುತ್ತಿದ್ದ ಕಾರ್ ಗೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. 
ಮೃತರನ್ನು ಕೇರಳದ ಲಿಲ್ಲಿಕುಟ್ಟಿ(54) ಮತ್ತು ಮ್ಯಾಥ್ಯೂ(58) ಎಂದು ಗುರುತಿಸಲಾಗಿದ್ದು, ಗಾಯಾಳುಗಳನ್ನು ಇನ್ನೂ ಗುರುತಿಸಬೇಕಿದೆ. 

ಬಿಳಿಕೆರೆ ಪೊಲೀಸರು ಸ್ಥಳಕ್ಕೆ ಧಾವಿಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. 

ಅಪಘಾತಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.