ಬೆಳಗಾವಿ: ಟ್ರಕ್ - ಟೆಂಪೊ ನಡುವೆ ಡಿಕ್ಕಿ, ಮೂವರು ಸಾವು, ನಾಲ್ವರಿಗೆ ಗಾಯ
ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸೋಮನಟ್ಟಿ ಕ್ರಾಸ್ ಬಳಿ ಟ್ರಕ್ ಮತ್ತು ಟೆಂಪೊ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಸೋಮನಟ್ಟಿ ಕ್ರಾಸ್ ಬಳಿ ಟ್ರಕ್ ಮತ್ತು ಟೆಂಪೊ ನಡುವೆ ನಡೆದ ಮುಖಾಮುಖಿ ಡಿಕ್ಕಿಯಲ್ಲಿ ಮೂರು ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು, ಮರಳು ತುಂಬಿದ್ದ ಟ್ರಕ್‍ವೊಂದು ಟೆಂಪೊಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೆಳಗಾವಿಗೆ ತೆರಳುತ್ತಿದ್ದ ಟೆಂಪೊನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತಪಟ್ಟವರನ್ನು ಬೈಲಹೊಂಗಲ ತಾಲ್ಲೂಕಿನ ಸೋಮನಟ್ಟಿಯ ನಿವಾಸಿ ಫಕೀರಪ್ಪ ತುಳಜನವರ್(42), ಗೋಕಾಕ ತಾಲ್ಲೂಕಿನ ಅಂಕಳಗಿ ನಿವಾಸಿಗಳಾದ ಲಕ್ಷ್ಮಿ ಗುಡ್ ಗೋಳಿ(35) ಮತ್ತು ಆಕೆಯ ಮಗ ಕುಮಾರ್ (8) ಎಂದು ಗುರುತಿಸಲಾಗಿದೆ.
ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅಪಘಾತ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


