ಹುಬ್ಬಳ್ಳಿ: ಮಕ್ಕಳಿಗೆ ಪಲ್ಸ್ ಪೋಲಿಯಾ ಲಸಿಕೆ ಹಾಕಿದ ಗೃಹ ಸಚಿವ ಅಮಿತ್ ಶಾ
ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾಗಿರುವ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮುಖಾಂತರ ಚಾಲನೆ ನೀಡಿದ್ದಾರೆ.

ಹುಬ್ಬಳ್ಳಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ದಿನವಾಗಿರುವ ಭಾನುವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಹುಬ್ಬಳ್ಳಿಯಲ್ಲಿ ಮಕ್ಕಳಿಗೆ ಪಲ್ಸ್ ಪೊಲಿಯೋ ಲಸಿಕೆ ಹಾಕುವ ಮುಖಾಂತರ ಚಾಲನೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ನಿವಾಸದ ಬಳಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅಮಿತ್ ಶಾ ಅವರು, ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿದರು.
ಪ್ರಹ್ಲಾದ್ ಜೋಶಿಯವರ ಕೋರಿಕೆ ಮೇಲೆ ಅವರ ಮನೆಗೆ ಅಮಿತ್ ಶಾ ಬೇಟಿ ನೀಡಿದ್ದು, ಅಮಿತ್ ಶಾ ಅವರಿಗೆ ಅದ್ದೂರಿಯಾಗಿದೇ ಸ್ವಾಗತ ಮಾಡಿದರು. ಬಳಿಕ ಜೋಶಿಯವರ ನಿವಾಸದಲ್ಲಿಯೇ ಉಪಹಾರ ಸೇವನೆ ಮಾಡಿದರು.
ಪೌರತ್ವ ತಿದ್ದುಪಡಿ ಕಾಯ್ದೆ ಪರವಾಗಿ ನೆಹರು ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಜನಜಾಗೃತಿ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಅಮಿತ್ ಶಾ ಅವರು ನಗರಕ್ಕೆ ಆಗಮಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


