ರಾಜ್ಯ

ಜನವರಿ 27ಕ್ಕೆ ಮಂಗಳೂರಿಗೆ ರಾಜನಾಥ್ ಸಿಂಗ್, ಸಿಎಎ ಪರ ಬೃಹತ್ ಸಮಾವೇಶದಲ್ಲಿ ಭಾಗಿ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜನವರಿ 27 ರಂದು ಮಂಗಳೂರಿನಲ್ಲಿ ನಡೆಯುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತ ಬೃಹತ್ ಜಾಗೃತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ಜನವರಿ 27ಕ್ಕೆ ಮಂಗಳೂರಿಗೆ ರಾಜನಾಥ್ ಸಿಂಗ್, ಸಿಎಎ ಪರ ಬೃಹತ್ ಸಮಾವೇಶದಲ್ಲಿ ಭಾಗಿ
ರಕ್ಷಣಾ ಸಚಿವ ರಾಜನಾಥ್ ಸಿಂಗ್
Published On :

ಮಂಗಳೂರು: ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಜನವರಿ 27 ರಂದು ಮಂಗಳೂರಿನಲ್ಲಿ ನಡೆಯುವ ಪೌರತ್ವ ತಿದ್ದುಪಡಿ ಮಸೂದೆ ಮತ್ತು ನಾಗರಿಕರ ರಾಷ್ಟ್ರೀಯ ನೋಂದಣಿ ಕುರಿತ ಬೃಹತ್ ಜಾಗೃತಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.

ನಗರದ ಕೂಳೂರು ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ 1 ಲಕ್ಷಕ್ಕೂ ಹೆಚ್ಚು ಜನರು  ಹಾಜರಾಗುವ ನಿರೀಕ್ಷೆಯಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆ ಬಿಜೆಪಿ ಅಧ್ಯಕ್ಷ ಮತ್ತು ಶಾಸಕ ಸಂಜೀವ ಮಠಂದೂರು ಹೇಳಿದ್ದಾರೆ.

ಇದೇ ವೇಳೆ ಅಂದು ಮಂಗಳುರಿನ ಎಲ್ಲಾ ವ್ಯಾಪಾರಿಗಳು ಮತ್ತು ವ್ಯಾಪಾರ ಸಂಸ್ಥೆಗಳು ಒಂದು ದಿನ ತಮ್ಮ ವ್ಯವಹಾರವನ್ನು ನಿಲ್ಲಿಸಿ ಸಿಎಎ ಮತ್ತು ಎನ್‌ಆರ್‌ಸಿಯನ್ನು ಬೆಂಬಲಿಸಿ ಈ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಅವರು ಮನವಿ ಮಾಡಿದರು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್, ದಕ್ಷಿಣ ಕನ್ನಡ ಜಿಲ್ಲಾ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಎರಡೂ ಜಿಲ್ಲೆಗಳ ಬಿಜೆಪಿ ಶಾಸಕರು ಮತ್ತು ಇತರೆ ಪ್ರಮುಖ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.