ಹಾಸನ: ಬಸ್ ನಿಲ್ದಾಣದಲ್ಲಿ ಗನ್, ಮಾರಕಾಸ್ತ್ರವಿದ್ದ ಬ್ಯಾಗ್ ಹಿಡಿದು ತಿರುಗಾಡುತ್ತಿದ್ದ ಉತ್ತರ ಭಾರತದವರನ್ನು ಬಂಧಿಸಿದ ಪೊಲೀಸರು!
ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ಹಾಸನ: ಬ್ಯಾಗ್ ಹಿಡಿದು ಶಂಕಾಸ್ಪದವಾಗಿ ಓಡಾಡುತ್ತಿದ್ದ ಇಬ್ಬರನ್ನು ಪೊಲೀಸರು ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ಬಸ್ ನಿಲ್ದಾಣದಲ್ಲಿ ಬಂಧಿಸಿದ್ದಾರೆ.
ಬಂಧಿತರನ್ನು ಉತ್ತರ ಭಾರತದವರು ಎಂದು ತಿಳಿದುಬಂದಿದ್ದು ಅವರ ಬಳಿಯಿದ್ದ ಬ್ಯಾಗ್ ನಲ್ಲಿ ರಿವಾಲ್ವರ್ ಮತ್ತು ಮಾರಕಾಸ್ತ್ರಗಳಿದ್ದದ್ದನ್ನು ಗಮನಿಸಿದ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಸ್ ನಿಲ್ದಾಣದಲ್ಲಿ ಇವರಿಬ್ಬರು ಅನುಮಾನಾಸ್ಪದವಾಗಿ ಓಡಾಡುತ್ತಿರುವುದನ್ನು ಗಮನಿಸಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಇವರಿಬ್ಬರು ಕೊಲೆ ಪ್ರಕರಣದಲ್ಲಿ ಬಾಗಿಯಾಗಿರುವ ಶಂಕೆ ವ್ಯಕ್ತವಾಗಿದ್ದುದ ಈ ನಿಟ್ಟಿನಲ್ಲಿ ಹೆಚ್ಚಿನ ತನಿಖೆ ಕೈಗೊಳ್ಳಲಾಗಿದೆ ಎಂದು ಎಸ್ ಪಿ ರಾಮ್ ನಿವಾಸ್ ಸೇಪಟ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


