ರಾಜ್ಯ

ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.

ಬಾಂಬ್ ಪತ್ತೆ ಪ್ರಕರಣ: ಆರೋಪಿ ಆದಿತ್ಯ ರಾವ್ ಮಂಗಳೂರು ಪೊಲೀಸರ ವಶಕ್ಕೆ
ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು
Published On :

ಬೆಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್ ಇಟ್ಟ ಆರೋಪಿ ಆದಿತ್ಯ ರಾವ್‌ನನ್ನು ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ  ಹಸ್ತಾಂತರಿಸಿದ್ದಾರೆ. 

ನ್ಯಾಯಾಲಯದ  ಅನುಮತಿ ಪಡೆದು ಮಂಗಳೂರು ಉತ್ತರ ವಿಭಾಗದ ಎಸಿಪಿ ಬೆಳ್ಳಿಯಪ್ಪ ಅವರ ನೇತೃತ್ವದ ತಂಡ  ಹಲಸೂರು ಗೇಟ್ ಠಾಣೆಯಲ್ಲಿ ಆರೋಪಿ ಆದಿತ್ಯ ನನ್ನು ವಶಕ್ಕೆ ಪಡೆದಿದೆ. 

ಎಂಎಸ್ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಸಿ, ಬೆಂಗಳೂರು ಪೊಲೀಸರು ಮಂಗಳೂರು ಪೊಲೀಸರಿಗೆ ಆರೋಪಿಯನ್ನು ಹಸ್ತಾಂತರಿಸಿದರು.

ಮೊದಲು ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರೋಪಿ ಆದಿತ್ಯನನ್ನು ಮಂಗಳೂರು ಪೊಲೀಸರಿಗೆ ಒಪ್ಪಿಸಬೇಕು ಎಂದು ನಿರ್ಣಯಿಸಲಾಗಿತ್ತು. ಕೊನೆಯ ಕ್ಷಣದಲ್ಲಿ ಭದ್ರತಾ ದೃಷ್ಟಿಯಿಂದ ಹಲಸೂರು ಗೇಟ್ ಠಾಣೆಯಲ್ಲಿ ಹಸ್ತಾಂತರಿಸುವ ಪ್ರಕ್ರಿಯೆ ಪೂರ್ಣಗೊಳಿಸುವ ನಿರ್ಧಾರವನ್ನು ಬೆಂಗಳೂರು ಪೊಲೀಸರು ಕೈಗೊಂಡರು. 

ಶೀಘ್ರವೇ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆರೋಪಿ ಆದಿತ್ಯ ರಾವ್‌ನನ್ನು ತನಿಖಾ ಧಿಕಾರಿಗಳು ಮಂಗಳೂರಿಗೆ ಕರೆದೊಯ್ಯಲಿದ್ದಾರೆ. ಅಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗೆ ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.