'ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು ನಾನೇ': ಬೆಂಗಳೂರು ಪೊಲೀಸರಿಗೆ ಬಾಂಬರ್ ಶರಣು
ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ.

ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಚ್ಚಾ ಬಾಂಬ್ ಇಟ್ಟು ಆತಂಕ ಸೃಷ್ಟಿಸಿದ್ದ ಬಾಂಬರ್ ಬೆಂಗಳೂರು ಪೊಲೀಸರಿಗೆ ಶರಣಾಗಿದ್ದಾನೆ.
ಹೌದು..ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದ ಶಂಕಿತ ಆರೋಪಿ ಆದಿತ್ಯ ರಾವ್ ರಾಜ್ಯ ಪೊಲೀಸ್ ಮಹಾನಿರ್ದೇಶಕರ ಕಚೇರಿಯಲ್ಲಿ ಐಜಿಪಿ ನೀಲಮಣಿರಾಜು ಅವರ ಎದುರು ಬುಧವಾರ ಬೆಳಿಗ್ಗೆ ಸುಮಾರು 8.40ರ ಸುಮಾರಿಗೆ ಶರಣಾಗಿದ್ದಾನೆ.
ಪೊಲೀಸ್ ಮೂಲಗಳ ಪ್ರಕಾರ ಮಣಿಪಾಲ ಮೂಲದ ಆದಿತ್ಯ ರಾವ್ ಎಂಬಾತ ‘ಬಾಂಬ್ ಇಟ್ಟಿದ್ದು ನಾನೇ’ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕಿ ನೀಲಮಣಿ ರಾಜು ಅವರ ಕಚೇರಿಗೆ ಆಗಮಿಸಿ ಶರಣಾಗಿ ತನ್ಮ ತಪ್ಪೊಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಪ್ರಸ್ತುತ ಆರೋಪಿಯನ್ನು ಹಲಸೂರುಗೇಟ್ ಪೊಲೀಸ್ ಠಾಣೆಗೆ ಕರೆತರಲಾಗಿದ್ದು, ಠಾಣೆಯ ಇನ್‌ಸ್ಟೆಕ್ಟರ್ ವಿಚಾರಣೆ ನಡೆಸುತ್ತಿದ್ದಾರೆ. ಆರೋಪಿಯನ್ನು ಅಜ್ಞಾತ ಸ್ಥಳಕ್ಕೆ ಕರೆದೊಯ್ದು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.
IED recovered from a bag at Mangaluru airport on 20th January: Suspect Aditya Rao has surrendered before Bangaluru police. Mangaluru police's investigation team is flying to Bengaluru to question him. #Karnataka pic.twitter.com/BTMnBbzhxJ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


