ಬೆಂಗಳೂರು: ಅನುಮಾನಾಸ್ಪದ ಸ್ಫೋಟ, ಶಾಸಕ ಹ್ಯಾರಿಸ್ ಸೇರಿ ನಾಲ್ವರಿಗೆ ಗಾಯ
ಸಿಲಿಕಾನ್ ಸಿಟಿ ಬೆಂಗಳೂರಿನ ವಿವೇಕನಗರದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಪರಿಣಾಮ ಶಾಸಕ ಎನ್.ಎ.ಹ್ಯಾರಿಸ್ ಸೇರಿದಂತೆ ಕೆಲವರಿಗೆ ಗಾಯವಾಗಿರುವ ಘಟನೆ ಇಂದು ಸಂಜೆ ಸಂಭವಿಸಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಿವೇಕನಗರದಲ್ಲಿ ಅನುಮಾನಾಸ್ಪದ ಸ್ಫೋಟ ಸಂಭವಿಸಿದ ಪರಿಣಾಮ ಶಾಸಕ ಎನ್.ಎ.ಹ್ಯಾರಿಸ್ ಸೇರಿದಂತೆ ಕೆಲವರಿಗೆ ಗಾಯವಾಗಿರುವ ಘಟನೆ ಇಂದು ಸಂಜೆ ಸಂಭವಿಸಿದೆ.
ಕಾರ್ಯಕ್ರಮವೊಂದರಲ್ಲಿ ಶಾಸಕ ಹ್ಯಾರಿಸ್ ಪಾಲ್ಗೊಂಡಿದ್ದರು. ಈ ವೇಳೆ ಸ್ಫೋಟ ಸಂಭವಿಸಿದೆ. ತಕ್ಷಣ ಶಾಸಕರು ಸೇರಿದಂತೆ ಗಾಯಗೊಂಡವರನ್ನು ಸೈಂಟ್ ಫಿಲೋಮಿನಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿವೇಕನಗರದಲ್ಲಿ ಹುಟ್ಟುಹಬ್ಬದ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಹಾರಿಸ್ ಅವರು ವೇದಿಕೆಯಲ್ಲಿ ಕುಳಿತಿದ್ದರು. ಈ ವೇಳೆ ವಸ್ತುವೊಂದು ಬಂದು ಅಪ್ಪಳಿಸಿ ಸ್ಫೋಟಗೊಂಡಿದೆ ಎಂದು ತಿಳಿದುಬಂದಿದೆ.
ಘಟನೆ ಕುರಿತು ಮಾಹಿತಿ ಪಡೆದ ಪೋಲೀಸರು, ಶ್ವಾನದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಶಾಸಕರ ಪುತ್ರ ನಲಪಾಡ್ ಪ್ರತಿಕ್ರಯಿಸಿದ್ದು "ಇದೊಂದು ಪೂರ್ವನಿಯೋಜಿತ ಕೃತ್ಯ, ಯಾರೋ ಉದ್ದೇಶಪೂರ್ವಕ ಮಾಡಿದ್ದಾರೆ. ತಂದೆ ಪ್ರಾಣಾಪಾಯದಿಂದ ಸ್ವಲ್ಪದರಲ್ಲೇ ಬಚಾವ್ ಆಗಿದ್ದಾರೆ" ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


