ರಾಜ್ಯ

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

ದುಷ್ಕರ್ಮಿಗಳ‌ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ತಡರಾತ್ರಿ ಚಾಮರಾಜಪೇಟೆಯ ಆಜಾದ್ ನಗರದಲ್ಲಿ ನಡೆದಿದೆ.

ಬೆಂಗಳೂರು: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ
ಸಂಗ್ರಹ ಚಿತ್ರ
Published On :

ಬೆಂಗಳೂರು: ದುಷ್ಕರ್ಮಿಗಳ‌ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ  ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬುಧವಾರ ತಡರಾತ್ರಿ ಚಾಮರಾಜಪೇಟೆಯ  ಆಜಾದ್ ನಗರದಲ್ಲಿ ನಡೆದಿದೆ.

35 ವರ್ಷದ ಲೋಕೇಶ್  ಅಲಿಯಾಸ್ ಸ್ಮಶಾನ ಲೋಕಿ ಕೊಲೆಯಾದ ಯುವಕ. ನಾಗರಬಾವಿ ನಿವಾಸಿಯಾಗಿದ್ದ ಲೋಕೇಶ್, ನಿನ್ನೆ ತಡರಾತ್ರಿ ಚಾಮರಾಜಪೇಟೆಯ ಆಜಾದ್ ನಗರಕ್ಕೆ ಬೈಕ್ ನಲ್ಲಿ ತೆರಳಿದ್ದಾಗ, ಈತ ಬರುವುದನ್ನೇ ಕಾದು ಕುಳಿತಿದ್ದ ಮೂರ್ನಾಲ್ಕು ಜನರ ತಂಡ ಏಕಾಏಕಿ ಮಚ್ಚು, ಲಾಂಗ್​ನಿಂದ ಹಲ್ಲೆ ನಡೆಸಿ ಹತ್ಯೆಗೈದು ಪರಾರಿಯಾಗಿದ್ದಾರೆ ಎನ್ನಲಾಗಿದೆ. 

ಮೃತ  ಲೋಕೇಶ್ ರೌಡಿಶೀಟರ್ ಸೈಕಲ್ ರವಿ ಸಹಚರನಾಗಿದ್ದು ಫೈನಾನ್ಸ್ ಹಾಗೂ ಬಡ್ಡಿ ವ್ಯವಹಾರ  ಮಾಡುತ್ತಿದ್ದ. ಈ ಹಿಂದೆ ಕೊಲೆ ಆರೋಪದಡಿ ಜೈಲು ಶಿಕ್ಷೆ ಅನುಭವಿಸಿದ್ದ ಎನ್ನಲಾಗಿದೆ. 

ಹಳೇ ವೈಷಮ್ಯದ ಹಿನ್ನೆಲೆಯಲ್ಲಿ  ಕೊಲೆಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಚಾಮರಾಜಪೇಟೆ ಪೊಲೀಸ್  ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಹತ್ತಿರದ ಸ್ಥಳದಲ್ಲಿರುವ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುವ ಮೂಲಕ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.