ಹಳೆ ದ್ವೇಷದ ಹಿನ್ನೆಲೆ: ಬೆಂಗಳೂರಿನಲ್ಲಿ ವ್ಯಕ್ತಿಯ ಭೀಕರ ಹತ್ಯೆ
ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಹಳೆ ದ್ವೇಷದ ಹಿನ್ನೆಲೆಯಲ್ಲಿ ಕುಖ್ಯಾತ ರೌಡಿ ಸಂತೋಷ್ ಕುಮಾರ್ ಅಲಿಯಾಸ್ ಸಂತೋಷ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ರಾಜಾನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಜಾನುಕುಂಟೆ ಮಾದಾಪುರ ರಸ್ತೆಯಲ್ಲಿ ರಾಜಾನುಕುಂಟೆ ಗ್ರಾಮದ ಸಂತೋಷ್ ಕುಮಾರ್ (25) ಕೊಲೆಯಾದವರು. ಇವರ ಮೇಲೆ ನಾಲ್ಕೈದು ಮಂದಿಯಿಂದ ಗುಂಪು ಹಲ್ಲೆ ಮಾಡಿ ಲಾಂಗ್‌ನಿಂದ ಕೊಚ್ಚಿ ಕೊಲೆ ಮಾಡಿದೆ.
ಈ ಘಟನೆಯಲ್ಲಿ ಸಂತೋಷ್ ಕುಮಾರ್ ಸ್ನೇಹಿತನ ಕೈಬೆರಳು ಸಹ ತುಂಡಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೊಲೆಯಾದ ಸಂತೋಷ್ ಕುಮಾರ್ ಹಿಂದೆ ತನ್ನ ಸ್ನೇಹಿತನಾದ ರೌಡಿಶೀಟರ್ ಹರಿಕೆರೆ ವೇಣು ಮೇಲೆ ಹಲ್ಲೆ ಮಾಡಿದ್ದನು. ಈ ಪ್ರಕರಣದಲ್ಲಿ ಹಲ್ಲೆಗೊಳಗಾದ ವೇಣು ಆಸ್ಪತ್ರೆಗೆ ದಾಖಲಾಗಿ ಬದುಕುಳಿದಿದ್ದ.
ಇತ್ತ ಹಲ್ಲೆ ಮಾಡಿದ ಸಂತೋಷ್ ಕುಮಾರ್ ಜೈಲುವಾಸ ಅನುಭವಿಸಿ ಹೊರಗಡೆ ಬಂದಿದ್ದನು. ಹೀಗಾಗಿ ರೌಡಿಶೀಟರ್ ವೇಣು ತನ್ನ ಸೇಡು ತೀರಿಸಿಕೊಳ್ಳುವ ಸಲುವಾಗಿ ಈ ಕೃತ್ಯವನ್ನು ಮಾಡಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ರಾಜನಕುಂಟೆ ಪೊಲೀಸರು ಕೊಲೆ ಆರೋಪಿಗಳಿಗಾಗಿ ಶೋಧಕಾರ್ಯ ನಡೆಸಿದ್ದಾರೆ.
ಮತ್ತೊಂದೆಡೆ ಮೃತನ ಸಂಬಂಧಿಕರು ರೌಡಿಶೀಟರ್ ವೇಣು ಹಾಗೂ ಆತನ ತಂದೆ ಸೇರಿ ಸಂತೋಷ್ ನನ್ನ ಕೊಲೆ ಮಾಡಿಸಿದ್ದಾರೆ ಎಂದು ಆರೋಪಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


