''ಫ್ರೀ ಕಾಶ್ಮೀರ' ದೇಶದ್ರೋಹವಲ್ಲವೇ..?, ಹಾಗಾದರೆ ನ್ಯಾಯಾಲಯಕ್ಕೆ ಬನ್ನಿ': ಮಾಜಿ ಸಿಎಂ ಸಿದ್ದುಗೆ ವಕೀಲರೊಬ್ಬರ ಬಹಿರಂಗ ಸವಾಲ್!
ಫ್ರೀ ಕಾಶ್ಮೀರ ಫಲಕ ಹೊತ್ತು ಇದೀಗ ವಿಚಾರಣೆ ಎದುರಿಸುತ್ತಿರುವ ಹೊರಾಟಗಾರ್ತಿ ನಳಿನಿ ಪರವಾಗಿ ಬ್ಯಾಟಿಂಗ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಕೀಲರೊಬ್ಬರು ಬಹಿರಂಗ ಸವಾಲೆಸೆದಿದ್ದಾರೆ.

ಬೆಂಗಳೂರು: ಫ್ರೀ ಕಾಶ್ಮೀರ ಫಲಕ ಹೊತ್ತು ಇದೀಗ ವಿಚಾರಣೆ ಎದುರಿಸುತ್ತಿರುವ ಹೊರಾಟಗಾರ್ತಿ ನಳಿನಿ ಪರವಾಗಿ ಬ್ಯಾಟಿಂಗ್ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ವಕೀಲರೊಬ್ಬರು ಬಹಿರಂಗ ಸವಾಲೆಸೆದಿದ್ದಾರೆ.
ಮೈಸೂರು ಮೂಲದ ಹಿರಿಯ ವಕೀಲ ಪಿ.ಜೆ. ರಾಘವೇಂದ್ರ ಅವರು ಸಿದ್ದರಾಮಯ್ಯ ಅವರಿಗೆ ಪತ್ರ ಬರೆಯುವ ಮೂಲಕ ನ್ಯಾಯಾಲಯಕ್ಕೆ ಆಹ್ವಾನಿಸಿ ಬಹಿರಂಗ ಸವಾಲೆಸೆದಿದ್ದಾರೆ. 'ಫ್ರೀ ಕಾಶ್ಮೀರ ಫಲಕ ಹಿಡಿದರೆ ದೇಶದ್ರೋಹವಲ್ಲ ಎಂದಿದ್ದಾರೆ ಸಿದ್ದರಾಮಯ್ಯ. ಸಿದ್ದರಾಮಯ್ಯನವರೂ ಕಾನೂನು ಪದವೀಧರರು, ವಕೀಲರಾಗಿದ್ದವರು. ಈಗಲೂ ವಕೀಲರಾಗಿ ಕಾರ್ಯ ನಿರ್ವಹಿಸಬಲ್ಲವರು. ಫ್ರೀ ಕಾಶ್ಮೀರ ಫಲಕ ಹಿಡಿದರೆ ದೇಶದ್ರೋಹವಲ್ಲ ಎಂದು ಸಿದ್ದರಾಮಯ್ಯನವರು ಮಾಧ್ಯಮಗಳ ಮುಂದೆ ಗುಡುಗುವ ಬದಲಾಗಿ ಅವರೇ ಕರಿಕೋಟು ಧರಿಸಿ ನ್ಯಾಯಾಲಯದಲ್ಲಿ ಆಪಾದಿತೆಯಾದ ನಳಿನಿಯ ಪರವಾಗಿ ವಕಾಲತ್ತು ವಹಿಸಲಿ. ಆಕೆಯ ವಿರುದ್ಧ ದಾಖಲಾದ ಪ್ರಕರಣವನ್ನೇ ರದ್ದುಗೊಳಿಸುವಂತೆ ನ್ಯಾಯಾಲಯದಲ್ಲಿ ವಾದ ಮಂಡಿಸುವುದರ ಜೊತೆಗೆ ಈ ಪ್ರಕರಣವನ್ನು ದಾಖಲಿಸಿದ ಪೊಲೀಸರು ಮತ್ತು ರಾಜ್ಯ ಸರ್ಕಾರಕ್ಕೆ ದಂಡ ವಿಧಿಸಿ ಆ ದಂಡದ ಮೊತ್ತವನ್ನು ಪರಿಹಾರದ ರೂಪದಲ್ಲಿ ಆಪಾದಿತೆ ನಳಿನಿಗೆ ದೊರಕಿಸುವಂತೆ ಸಂವಿಧಾನಬದ್ಧವಾಗಿ ಹೋರಾಟ ನಡೆಸಲಿ ಎಂದು ಹೇಳಿದ್ದಾರೆ.

ರಾಘವೇಂದ್ರ ಅವರ ಈ ಪತ್ರ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ. ಈ ಹಿಂದೆ ಫ್ರೀ ಕಾಶ್ಮೀರ ಫಲಕ ಹಿಡಿದು ಹೋರಾಟ ಮಾಡಿದ್ದ ನಳಿನಿಯನ್ನು ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ನಳಿನಿ ಪರವಾಗಿ ವಾದ ಮಾಡದಂತೆ ಮೈಸೂರು ನ್ಯಾಯವಾಧಿಗಳು ನಿರ್ಧರಿಸಿದ್ದರು. ಈ ಕುರಿತಂತೆ ಮಾತನಾಡಿದ್ದ ಸಿದ್ದರಾಮಯ್ಯ ಅವರು, ಫ್ರೀ ಕಾಶ್ಮೀರ ಫಲಕ ಹಿಡಿದರೆ ಅದು ದೇಶದ್ರೋಹವಲ್ಲ ಎಂದು ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


