ಮಂಗಳೂರು ಬಾಂಬರ್ ಮಾನಸಿಕ ಅಸ್ವಸ್ಥನೇ, ಅಲ್ಲವೇ ಎಂಬುದನ್ನು ವೈದ್ಯರೇ ಸ್ಪಷ್ಟಪಡಿಸಬೇಕು: ಜಾರಕಿಹೊಳಿ
ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.

ಬೆಳಗಾವಿ: ತನಿಖೆಗೂ ಮುನ್ನವೇ ಮಂಗಳೂರು ಬಾಂಬರ್ ಆದಿತ್ಯರಾವ್ ನನ್ನು ಮಾನಸಿಕ ಅಸ್ವಸ್ಥ ಎಂದು ಹೇಳಿದೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಸತೀಶ್ ಜಾರಕಿಹೊಳಿಯವರು ತೀವ್ರವಾಗಿ ಕಿಡಿಕಾರಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಸ್ಪಷ್ಟ ಮಾಹಿತಿಗಳಿಲ್ಲದೆಯೇ ಬಾಂಬರ್ ನನ್ನು ಮಾನಸಿಕ ಅಸ್ವಸ್ಥ ಎಂದು ಸಚಿವರು ಹೇಳಿರುವುದು ಸರಿಯಲ್ಲ. ಘಟನೆ ಸಂಭವಿಸಿದಾಗ ಹಲವರು ಸಾಕಷ್ಟು ಹೇಳಿಕೆಗಳನ್ನು ನೀಡಿದ್ದರು, ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ವ್ಯಕ್ತಿ ಎಂದು ಹೇಳಲು ಆರಂಭಿಸಿದ್ದರು. ಇದೀಗ ವ್ಯಕ್ತಿ ಯಾವ ಸಮುದಾಯಕ್ಕೆ ಸೇರಿದವನು ಎಂಬುದು ಸ್ಪಷ್ಟವಾಗುತ್ತಿದ್ದಂತೆಯೇ ಹೊಸ ರೀತಿಯ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆಂದು ಹೇಳಿದ್ದಾರೆ.
ಒಬ್ಬ ಕ್ರಿಮಿನಲ್ ವ್ಯಕ್ತಿ ಹಾಗೂ ಸಮಾಜ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿಯನ್ನು ಸರ್ಕಾರ ಸಮರ್ಥಿಸಿಕೊಳ್ಳುತ್ತಿರುವುದು ಸರಿಯಲ್ಲ. ರಾಷ್ಟ್ರದ ಹಿತಾಸಕ್ತಿಗೆ ವಿರುದ್ಧವಾಗಿ ನಡೆದ ವ್ಯಕ್ತಿಯನ್ನು ರಾಷ್ಟ್ರ ವಿರೋಧಿ ಎಂದೇ ಪರಿಗಣಿಸಬೇಕು ಎಂದು ತಿಳಿಸಿದ್ದಾರೆ.
ತನಿಖೆಗೂ ಮುನ್ನವೇ ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದು ಕರೆಯುವುದು ನ್ಯಾಯಯುತವಲ್ಲ. ತನಿಖಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಯಬೇಕು. ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದು ಘೋಷಿಸುವ ಹಕ್ಕು ವೈದ್ಯರಿಗಷ್ಟೇ ಇದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


