ಗಣರಾಜ್ಯೊತ್ಸವ ದಿನದಂದು ಕೆಲವೆಡೆ ಸಂಚಾರ ನಿರ್ಬಂಧ
ಗಣರಾಜ್ಯೋತ್ಸವ ದಿನದಂದು ರಾಜ್ಯಮಟ್ಟದ ಕಾರ್ಯಕ್ರಮ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಬೆಂಗಳೂರು: ಗಣರಾಜ್ಯೋತ್ಸವ ದಿನದಂದು ರಾಜ್ಯಮಟ್ಟದ ಕಾರ್ಯಕ್ರಮ ನಗರದ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನದ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಹಳದಿ ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಕಬ್ಬನ್ ರಸ್ತೆಯಲ್ಲಿ ಸಂಚರಿಸಿ ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಉತ್ತರಾಭಿಮುಖವಾಗಿರುವ ಪ್ರವೇಶ ದ್ವಾರ-1ರ ಮುಖಾಂತರ ಒಳಪ್ರವೇಶಿಸಿ ತಮ್ಮ ವಾಹನಗಳನ್ನು ಪರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ನಿಲುಗಡೆ ಮಾಡಬೇಕು ಎಂದು ಸಂಚಾರ ವಿಭಾಗದ ಪೊಲೀಸರು ತಿಳಿಸಿದ್ದಾರೆ.
ಬಿಳಿ ಕಾರ್ ಪಾಸುಗಳನ್ನು ಹೊಂದಿರುವ ಗಣ್ಯರು, ಸಚಿವರು, ಸರ್ಕಾರದ ಕಾರ್ಯದರ್ಶಿಗಳು, ರಕ್ಷಣಾ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳು ಕಬ್ಬನ್ ರಸ್ತೆಯಲ್ಲಿ ಸಂಚರಿಸಿ, ಪ್ರವೇಶ ದ್ವಾರ -2ರ ಮುಖಾಂತರ ಒಳಪ್ರವೇಶಿಸಿ ನಂತರ ಪರೇಡ್ ಮೈದಾನದ ಪಶ್ಚಿಮ ಭಾಗದಲ್ಲಿ ವಾಹನ ನಿಲುಗಡೆ ಪ್ರದೇಶದಲ್ಲಿ ನಿಲುಗಡೆ ಮಾಡಬೇಕು.
ಪಿಂಕ್ ಪಾಸ್‌ಗಳನ್ನು ಹೊಂದಿರುವ ಆಹ್ವಾನಿತರು ತಮ್ಮ ವಾಹನಗಳನ್ನು ಮೈನ್ ಗಾರ್ಡ್ ಕ್ರಾಸ್ ರಸ್ತೆ ಸಫೀನಾ ಪ್ಲಾಜಾ ಮುಂಭಾಗ, ಕಾಮರಾಜ ರಸ್ತೆ ಆರ್ಮಿ ಪಬ್ಲಿಕ್ ಶಾಲೆ ಮುಂಭಾಗ ನಿಲುಗಡೆ ಮಾಡಿ ಗೇಟ್ ನಂ. 3ರಲ್ಲಿ ಕಾಲ್ನಡಿಗೆಯ ಮೂಲಕ ಪ್ರವೇಶ ಮಾಡಬೇಕು.
ಹಸಿರು ಬಣ್ಣದ ಪಾಸ್‌ಗಳನ್ನು ಹೊಂದಿರುವವರು ತಮ್ಮ ವಾಹನಗಳನ್ನು ಶಿವಾಜಿನಗರ ಬಸ್ ನಿಲ್ದಾಣ 1ನೇ ಮಹಡಿಯ ವಾಹನ ನಿಲುಗಡೆ ಸ್ಥಳದಲ್ಲಿ ನಿಲುಗಡೆ ಮಾಡಿ ಪರೇಡ್ ಮೈದಾನದ ಪ್ರವೇಶ ದ್ವಾರ 4ರ ಮುಖಾಂತರ ಕಾಲ್ನಡಿಗೆಯಲ್ಲಿ ಒಳ ಪ್ರವೇಶಿಸಬೇಕು ಎಂದು ಕೋರಲಾಗಿದೆ.
ಭದ್ರತಾ ದೃಷ್ಟಿಯಿಂದ ಪರೇಡ್‌ಗೆ ಬರುವ ಎಲ್ಲಾ ಆಹ್ವಾನಿತಗರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್, ಹೆಲ್ಮೆಟ್, ಕ್ಯಾಮರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿ ತೆಗೆದುಕೊಂಡು ಹೋಗಬಾರದು. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಬೆಳಗ್ಗೆ 8 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.
ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಕಬ್ಬನ್ ರಸ್ತೆ, ಸಿಟಿಒ ವೃತ್ತದಿಂದ ಕೆ.ಆರ್.ರಸ್ತೆ ಮತ್ತು ಕಬ್ಬನ್ ರಸ್ತೆ ಜಂಕ್ಷನ್ ವರೆಗೆ ಹಾಗೂ ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ.
ಮೈದಾನ ಮತ್ತು ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೇ ಮತ್ತು ಮೆಟ್ರೋ ಸೇವೆಯನ್ನು ಬಳಸುವಂತೆ ಕೋರಲಾಗಿದೆ. ಬಿಬಿಎಂಪಿಯಿಂದ ಕುಡಿಯುವ ನೀರು ಮತ್ತು ಶೌಚಾಲಯ ವ್ಯವಸ್ಥೆ ಏರ್ಪಡಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


