ಕಲಬುರಗಿ: ಕಾರಿಗೆ ಲಾರಿ ಡಿಕ್ಕಿ, ಇಬ್ಬರು ಸಾವು
ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕುದ್ರಿಮೋದಿ ಕ್ರಾಸ್ ಬಳಿ ಸಂಭವಿಸಿದೆ.

ಕಲಬುರಗಿ: ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಕಮಲಾಪುರ ತಾಲೂಕಿನ ಕುದ್ರಿಮೋದಿ ಕ್ರಾಸ್ ಬಳಿ ಸಂಭವಿಸಿದೆ.
ರೋಷನ್ ದರ್ಗಿ (20), ಸಂತೋಷ್ (24) ಮೃತ ದುರ್ದೈವಿಗಳು.
ಮೃತರು ಮೂಲತಃ ಕಲಬುರಗಿ ನಗರದ ಜಗತ್ ಬಡಾವಣೆ ನಿವಾಸಿಗಳು ಎಂದು ತಿಳಿದು ಬಂದಿದೆ.
ಕಾರಿನಲ್ಲಿದ್ದ ಮತ್ತಿಬ್ಬರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು, ಇಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕಮಲಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


