ರಾಜ್ಯ

ಮಂಡ್ಯ: ಕೌಟುಂಬಿಕ ಕಲಹ, ನಾಲೆಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ

ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ಮಂಡ್ಯ: ಕೌಟುಂಬಿಕ ಕಲಹ, ನಾಲೆಗೆ ಬಿದ್ದು ತಾಯಿ, ಇಬ್ಬರು ಮಕ್ಕಳು ಆತ್ಮಹತ್ಯೆ
ಸಾಂದರ್ಭಿಕ ಚಿತ್ರ
Published On :

ಮಂಡ್ಯ: ಮಂಡ್ಯ ತಾಲೂಕಿನ ತಿಬ್ಬನಹಳ್ಳಿ ಬಳಿ ವಿಶ್ವೇಶ್ವರಯ್ಯ ನಾಲೆಗೆ ಬಿದ್ದು ತಾಯಿ ಹಾಗೂ ಇಬ್ಬರು ಮಕ್ಕಳು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ನಾಲೆಗೆ ಬಿದ್ದ ಮೂವರಲ್ಲಿ ತಾಯಿಯನ್ನು ರಕ್ಷಣೆ ಮಾಡಲಾಯಿತು. ಆದರೆ ತಾಯಿ ಬದುಕುಳಿಯಲಿಲ್ಲ. ತಾಯಿಯ ಜೊತೆ ಬಿದ್ದ ಇಬ್ಬರು ಮಕ್ಕಳು ನಾಲೆಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮಂಡ್ಯ ತಾಲೂಕಿನ ಹುಳ್ಳೇನಹಳ್ಳಿಯ ಜ್ಯೋತಿ (33), ನಿಸರ್ಗ (7), ಪವನ್(4) ಮೃತ ದುರ್ದೈವಿಗಳು.

ಈ ಸಂಬಂಧ ಶಿವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.