ಇವಿಎಂ ಉತ್ತಮ ನಿರ್ವಹಣೆಗಾಗಿ ಚುನಾವಣಾಧಿಕಾರಿ ವಿ.ರಾಘವೇಂದ್ರಗೆ ರಾಷ್ಟ್ರಪತಿಗಳಿಂದ ವಿಶೇಷ ಪ್ರಶಸ್ತಿ ಪ್ರದಾನ
ಭಾರತ ಚುನಾವಣಾ ಆಯೋಗ ನವದೆಹಲಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದ ರಾಜ್ಯದ ಜಂಟಿ....

ನವದೆಹಲಿ: ಭಾರತ ಚುನಾವಣಾ ಆಯೋಗ ನವದೆಹಲಿಯಲ್ಲಿ ಶನಿವಾರ ಹಮ್ಮಿಕೊಂಡಿದ್ದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಭಾಜನರಾಗಿದ್ದ ರಾಜ್ಯದ ಜಂಟಿ ಉಪಮುಖ್ಯ ಚುನಾವಣಾಧಿಕಾರಿ ವಿ. ರಾಘವೇಂದ್ರ ಅವರು ರಾಷ್ಟ್ರಪತಿಗಳಿಂದ ಪ್ರಶಸ್ತಿ ಸ್ವೀಕರಿಸಿದರು.
ಪ್ರತಿ ವರ್ಷವು ನಡೆಯುವ ರಾಷ್ಟ್ರೀಯ ಮತದಾರರ ದಿನಾಚರಣೆಯಂದು ಭಾರತ ಚುನಾವಣಾ ಆಯೋಗವು ಚುನಾವಣಾ ಮತ್ತು ಮತದಾರರ ಪಟ್ಟಿ ನಿರ್ವಹಣೆ ಮತ್ತು ಇದಕ್ಕೆ ಸಂಬಂಧಿಸಿದ ಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಅಧಿಕಾರಿಗಳು ಹಾಗೂ ಸಂಸ್ಥೆಗಳಿಗೆ ರಾಷ್ಟ್ರೀಯ ಅತ್ಯುತ್ತಮ ಚುನಾವಣಾ ಕಾರ್ಯಗಳ ಪ್ರಶಸ್ತಿ ನೀಡುತ್ತದೆ.
ಭಾರತ ಚುನಾವಣಾ ಆಯೋಗವು 2019ರ ರಾಷ್ಟ್ರೀಯ ಪ್ರಶಸ್ತಿಗಳನ್ನು ಘೋಷಿಸಿತ್ತು. ಚುನಾವಣೆಗಳಲ್ಲಿ ಇವಿಎಂ ನಿರ್ವಹಣೆಗಾಗಿ ವಿಶೇಷ ಪ್ರಶಸ್ತಿಗೆ ಕರ್ನಾಟಕದ ಜಂಟಿ ಮುಖ್ಯ ಚುನಾವಣಾಧಿಕಾರಿ ವಿ.ರಾಘವೇಂದ್ರ ಹಾಗೂ ಮತದಾನ ಜಾಗೃತಿಗಾಗಿ ಮಾಧ್ಯಮ ಪ್ರಶಸ್ತಿಗೆ ಬೆಂಗಳೂರಿನ ರೆಡ್ ಎಫ್ಎಮ್ ಸಂಸ್ಥೆ ಅತ್ಯುತ್ತಮ ಪ್ರಶಸ್ತಿಗೆ ಭಾಜನವಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


