ಖ್ಯಾತ ಕಾದಂಬರಿಕಾರ ಎಸ್ ಎಲ್ ಭೈರಪ್ಪಗೆ 'ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿ
ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಧಾರವಾಡ: ಖ್ಯಾತ ಕನ್ನಡ ಕಾದಂಬರಿಕಾರ ಎಸ್ ಎಲ್ ಭೈರಪ್ಪ ಅವರನ್ನು ಧಾರವಾಡದ ಡಾ ದ ರಾ ಬೇಂದ್ರೆ ರಾಷ್ಟ್ರೀಯ ಟ್ರಸ್ಟ್ ಸ್ಥಾಪಿಸಿರುವ ಈ ವರ್ಷದ ‘ಅಂಬಿಕಾತನಯದತ್ತ’ ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಶಸ್ತಿಯು 1 ಲಕ್ಷ ರೂ.ಗಳ ನಗದು ಮತ್ತು ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಬೇಂದ್ರೆಯವರ 125 ನೇ ಜನ್ಮ ದಿನಾಚರಣೆಯ ಅಂಗವಾಗಿ ಜ 31 ರಂದು ಧಾರವಾಡದ ಸಾಧನಕೇರಿಯಲ್ಲಿರುವ ಬೆಂದ್ರೆ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಭೈರಪ್ಪ ಅವರ ಜೀವನ ಮತ್ತು ಕೃತಿಗಳ ಕುರಿತ ವಿಚಾರ ಸಂಕಿರಣ ಅದೇ ದಿನ ನಡೆಯಲಿದೆ. ಭೈರಪ್ಪ ಅವರ ಪುಸ್ತಕಗಳನ್ನು ಪ್ರದರ್ಶನಕ್ಕಿಡಲಾಗುವುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


