ಜೆಡಿಎಸ್ ಹಿರಿಯ ಮುಖಂಡ ಮಾಜಿ ಸಚಿವ ಅಮರನಾಥ ಶೆಟ್ಟಿ ವಿಧಿವಶ
ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರ ಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ.

ಮಂಗಳೂರು: ರಾಜ್ಯದ ಮಾಜಿ ಸಚಿವ, ಜಾತ್ಯತೀತ ಜನತಾ ದಳ ಮುಖಂಡ, ಹಿರಿಯ ರಾಜಕಾರ ಣಿ ಕೆ. ಅಮರನಾಥ ಶೆಟ್ಟಿ (80) ಸೋಮವಾರ ನಿಧನರಾಗಿದ್ದಾರೆ.
ಮೂಡಬಿದರಿಯವರಾದ ಅಮರನಾಥ ಶೆಟ್ಟಿ, ಅನಾರೋಗ್ಯದಿಂದ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ನಿಧನರಾದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಆಳ್ವಾಸ್ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಆಗಿದ್ದ ಅಮರನಾಥ ಶೆಟ್ಟಿ 1965ರಲ್ಲಿ ರಾಜಕಾರಣ ಪ್ರವೇಶಿಸಿದರು. ಪಾಲಡ್ಕ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿದ್ದರು. ಮೂಡುಬಿದ್ರಿ ಕ್ಷೇತ್ರದಿಂದ 1983ರಲ್ಲಿ ಶಾಸಕರಾಗಿ ವಿಧಾನಸಭೆ ಪ್ರವೇಶಸಿದರು. 1987 ಮತ್ತು 1994ರಲ್ಲಿ ಅದೇ ಕ್ಷೇತ್ರದಿಂದ ಜಯಗಳಿಸಿದ್ದರು. ಪ್ರವಾಸೋದ್ಯಮ ಮತ್ತು ಕಾರ್ಮಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಅಮರನಾಥ ಶೆಟ್ಟಿ ಅವರು ನಮ್ಮನ್ನು ಅಗಲಿದ ವಿಚಾರ ಕೇಳಿ ತೀವ್ರ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಭಗವಂತ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಜೆಡಿಎಸ್ ನಾಯಕ ಎಚ್.ಡಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.
1965ರಲ್ಲಿ ರಾಜಕೀಯ ಪ್ರವೇಶ ಮಾಡಿದ್ದ ಅವರು, ಕಾರ್ಕಳ ತಾಲೂಕಿನ ಪಾಲಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದರು. ಮುಂದೆ ಮೂಡಬಿದಿರೆ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಕಾರ್ಕಳ ತಾಲೂಕು ಮಾರುಕಟ್ಟೆ ಸೊಸೈಟಿ ಅಧ್ಯಕ್ಷ, ಸಹಕಾರಿ ಸೇವಾ ಬ್ಯಾಂಕ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದರು .
ಮೂಡುಬಿದಿರೆ ವಿಧಾನಸಭಾ ಕ್ಷೇತ್ರದಿಂದ 1983, 1987 ಮತ್ತು 1994 ಹೀಗೆ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿ, ಪ್ರವಾಸೋದ್ಯಮ ಮತ್ತು ಮುಜರಾಯಿ ಸಚಿವರಾಗಿದ್ದರು. ನಂತರ ಅಭಯಚಂದ್ರ ಅವರ ಎದುರು ನಿರಂತರ ಪರಾಭವಗೊಂಡು, ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


